ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದ 18 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್‌: ಧಾರಾಕಾರ ಮಳೆಯಾಗುವ ಸಾಧ್ಯತೆ

Last Updated 19 ನವೆಂಬರ್ 2021, 17:00 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ನ.20ರಂದು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತುಮಕೂರು, ಶಿವಮೊಗ್ಗ, ರಾಮನಗರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ.

ಎರಡು ದಿನಗಳಿಂದ ಹವಾಮಾನದಲ್ಲಿ ಮುಂದುವರಿದಿರುವ ವಾಯುಭಾರ ಕುಸಿತ ಹಾಗೂಮೇಲ್ಮೈ ಸುಳಿಗಾಳಿಯ ಪರಿಣಾಮದಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ.ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ನ.22ರಿಂದ ರಾಜ್ಯದಲ್ಲಿ ಮಳೆ ತಗ್ಗಲಿದೆ.

ಮಳೆ–ಎಲ್ಲಿ, ಎಷ್ಟು?: ಕೋಲಾರ ಜಿಲ್ಲೆಯ ಬಂಗಾರಪೇಟೆ ಹಾಗೂ ಮಾಲೂರಿನಲ್ಲಿ ಶುಕ್ರವಾರ ತಲಾ 17 ಸೆಂ.ಮೀ ಗರಿಷ್ಠ ಮಳೆಯಾಗಿದೆ.

ಗುಬ್ಬಿ, ತುಮಕೂರು 15, ಚಿಂತಾಮಣಿ 12, ಮುಳಬಾಗಿಲು, ಶ್ರೀನಿವಾಸಪುರ 11, ಶಿಡ್ಲಘಟ್ಟ, ತೊಂಡೆಬಾವಿ, ಹೊಸಕೋಟೆ 10, ದೇವನಹಳ್ಳಿ, ದೊಡ್ಡಬಳ್ಳಾಪುರ, ಗೌರಿಬಿದನೂರು, ಚಿಕ್ಕಬಳ್ಳಾಪುರ 9, ಮಧುಗಿರಿ 8, ಪಾವಗಡ, ನೆಲಮಂಗಲ, ಗುಡಿಬಂಡೆ 7, ಹಾಸನ, ಶಿರಾ, ಕಂಪ್ಲಿ 6, ತಿಪಟೂರು, ಹಿರಿಯೂರು, ಮಾಗಡಿ 5, ಚನ್ನಪಟ್ಟಣ 4, ಗಂಗಾವತಿ, ಮದ್ದೂರು, ಮಳವಳ್ಳಿಯಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ.

ದಾವಣಗೆರೆಯಲ್ಲಿ 19 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT