ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾಲಿಯಾಗುವ ಶಿಕ್ಷಕ ಹುದ್ದೆಗಳಿಗೆ ತಕ್ಷಣವೇ ನೇಮಕ: ಬೊಮ್ಮಾಯಿ

Last Updated 5 ಸೆಪ್ಟೆಂಬರ್ 2022, 19:26 IST
ಅಕ್ಷರ ಗಾತ್ರ

ಬೆಂಗಳೂರು: ‘ನಿವೃತ್ತಿಯಾಗುವ ಶಿಕ್ಷಕರ ಸಂಖ್ಯೆಯನ್ನು ವರ್ಷದ ಮುನ್ನವೇ ಲೆಕ್ಕ ಹಾಕಿ, ಹುದ್ದೆ ಖಾಲಿಯಾಗುತ್ತಿದ್ದಂತೆ ಬದಲಿ ನೇಮಕ ಮಾಡುವ ವ್ಯವಸ್ಥೆ ರೂಪಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,‘ಶಿಕ್ಷಣ ಕ್ಷೇತ್ರಕ್ಕೆ ಈ ವರ್ಷದ ಬಜೆಟ್‌ನಲ್ಲಿ ₹25 ಸಾವಿರ ಕೋಟಿ ಅನುದಾನ ಒದಗಿಸಲಾಗಿದೆ. ಇದರಲ್ಲಿ ಸುಮಾರು ₹19 ಸಾವಿರ ಕೋಟಿ ಶಿಕ್ಷಕರು ಮತ್ತು ಸಿಬ್ಬಂದಿ ವೇತನಕ್ಕೆ ಖರ್ಚಾಗುತ್ತದೆ. ಉಳಿದ ಅನುದಾನದಲ್ಲಿ ₹5 ಸಾವಿರ ಕೋಟಿ ಮೊತ್ತದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಬಳಸಲಾಗುತ್ತಿದೆ. ಈ ಮೊತ್ತ ದಲ್ಲಿ 23 ಸಾವಿರ ಶಾಲೆಗಳನ್ನು ಹೊಸದಾಗಿ ನಿರ್ಮಿಸಲು ಉದ್ದೇಶಿಸಲಾಗಿದ್ದು, ಮೊದಲ ಹಂತದಲ್ಲಿ 8,101 ಶಾಲೆಗಳ ಕಟ್ಟಡಗಳನ್ನು ನಿರ್ಮಿಸಲಾಗಿದೆ. ಇದೇ ಮೊದಲ ಬಾರಿ ಒಂದೇ ವರ್ಷದಲ್ಲಿ ಇಷ್ಟೊಂದು ಶಾಲೆಗಳನ್ನು ನಿರ್ಮಿಸಿರುವುದು ದಾಖಲೆಯಾಗಿದೆ’ ಎಂದು ವಿವರಿಸಿದರು.

‘ಎಲ್ಲ ಸರ್ಕಾರಿ ಶಾಲೆಗಳಲ್ಲಿ ಹೆಣ್ಣುಮಕ್ಕಳಿಗೆ ಮತ್ತು ಗಂಡಮಕ್ಕಳಿಗೆ ಪ್ರತ್ಯೇಕ ಶೌಚಾಲಯಗಳನ್ನು ನಿರ್ಮಿಸುವ ಯೋಜನೆ ರೂಪಿಸಲಾಗಿದೆ. ಮುಂದಿನ ವರ್ಷದ ಆಗಸ್ಟ್ 15ರ ಒಳಗೆ ಎಲ್ಲ ಸರ್ಕಾರಿ ಶಾಲೆಗಳಲ್ಲಿಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು’ ಎಂದು ತಿಳಿಸಿದರು.

‘ಶಿಕ್ಷಕರಿಗೆ ಕಿರುಕುಳ ತಪ್ಪಿಸಲು ನಿಯಮಗಳನ್ನು ಸರಳಗೊಳಿಸಲಾಗಿದೆ. ಯಾವುದೇ ಪರಿಶೀಲನೆ ಇಲ್ಲದೆ ಹೊಸ ಶಾಲೆಗಳ ಸ್ಥಾಪನೆಗೆ ನಿರಾಕ್ಷೇಪಣಾ ಪತ್ರ ನೀಡುತ್ತಿರುವ ಪ್ರಕರಣಗಳನ್ನು ಗಮನಿಸಲಾಗಿದೆ. ಸರ್ಕಾರದ ನಿಯಮಗಳನ್ನು ಪಾಲಿಸದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT