ಶನಿವಾರ, ಜುಲೈ 31, 2021
28 °C

ಲಸಿಕೆ ದರ ನಿಯಂತ್ರಣ ಅಸಾಧ್ಯ: ಡಾ.ಕೆ. ಸುಧಾಕರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಖಾಸಗಿ ಆಸ್ಪತ್ರೆಗಳು ಮತ್ತು ಆರೋಗ್ಯ ಸಂಸ್ಥೆಗಳು ನೇರವಾಗಿ ಉತ್ಪಾದಕರಿಂದ ಕೋವಿಡ್‌ ಲಸಿಕೆ ಖರೀದಿಸಿ, ವಿತರಿಸುತ್ತಿವೆ. ಖಾಸಗಿಯಾಗಿ ನೀಡುವ ಲಸಿಕೆಯ ದರವನ್ನು ಸರ್ಕಾರ ನಿಯಂತ್ರಿಸುವುದು ಅಸಾಧ್ಯ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ಹೇಳಿದರು.

ಖಾಸಗಿ ಆಸ್ಪತ್ರೆಗಳು ಕೋವಿಡ್‌ ಲಸಿಕೆಗೆ ಹೆಚ್ಚಿನ ದರ ನಿಗದಿಪಡಿಸಿರುವ ಕುರಿತು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಅವರು, ‘ಖಾಸಗಿ ಆಸ್ಪತ್ರೆಗಳು ನೇರವಾಗಿ ಲಸಿಕೆ ಖರೀದಿಸುತ್ತಿವೆ. ಅವು ವಿತರಿಸುವ ಲಸಿಕೆಯ ದರವನ್ನು ನಿಯಂತ್ರಿಸುವುದಕ್ಕೆ ಸರ್ಕಾರಕ್ಕೆ ಅವಕಾಶಗಳಿಲ್ಲ.  ಕೆಲವೇ ದಿನಗಳಲ್ಲಿ ಸರ್ಕಾರದಿಂದಲೇ ಎಲ್ಲರಿಗೂ ಲಸಿಕೆ ನೀಡುವುದು ಸಾಧ್ಯವಾಗಲಿದೆ’ ಎಂದರು.

ರಾಜ್ಯದಲ್ಲಿ ಈವರೆಗೆ 1.22 ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ. 11.46 ಲಕ್ಷ ಡೋಸ್‌ಗಳಷ್ಟು ಲಸಿಕೆಯ ದಾಸ್ತಾನು ಇದೆ ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.