ಭಾನುವಾರ, ಜನವರಿ 16, 2022
28 °C

ಫೆಬ್ರುವರಿಯಲ್ಲಿ ತಾ.ಪಂ., ಜಿ.ಪಂ. ಚುನಾವಣೆ: ಈಶ್ವರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ‘ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಪುನರ್‌ವಿಂಗಡಣೆಗೆ ಈಗಾಗಲೇ ಸಮಿತಿ ರಚಿಸಲಾಗಿದ್ದು, ಆ ಸಮಿತಿ ಜನವರಿಯಲ್ಲಿ ವರದಿ ಸಲ್ಲಿಸಲಿದೆ. ಫೆಬ್ರುವರಿಯಲ್ಲಿ ಚುನಾವಣೆ ನಡೆಯಬಹುದು’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಕೆ.ಎಸ್‌.ಈಶ್ವರಪ್ಪ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಿಧಾನಪರಿಷತ್ತಿನ ಚುನಾವಣೆಯಲ್ಲಿ ಕಾಂಗ್ರೆಸ್‌ ತಮ್ಮ ಪಕ್ಷಕ್ಕೆ ಸಂಬಂಧವೇ ಇಲ್ಲದವರನ್ನು ಕಣಕ್ಕಿಳಿಸಿದೆ. ಕೇವಲ ಕೋಟ್ಯಧಿಪತಿ ಎಂಬ ಕಾರಣಕ್ಕೆ ಹಲವು ಕಡೆಗಳಲ್ಲಿ ಅಭ್ಯರ್ಥಿಗೆ ಟಿಕೆಟ್‌ ನೀಡಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕ’ ಎಂದು ತಿಳಿಸಿದರು.

‘ಜೆಡಿಎಸ್‌ ಅಭ್ಯರ್ಥಿಗಳು ಇಲ್ಲದ ಕಡೆಗಳಲ್ಲಿ ಯಾರಿಗೆ ಬೆಂಬಲ ನೀಡಬೇಕು ಎಂದು ಕೊನೇ ಕ್ಷಣದಲ್ಲಿ ನಿರ್ಧರಿಸಲಾಗುವುದು ಎಂದು ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಕಾಂಗ್ರೆಸ್‌ ಅನ್ನು ವಿರೋಧಿಸಿಕೊಂಡೇ ಬಂದ ಪಕ್ಷ ಜೆಡಿಎಸ್‌. ಹಾಗಾಗಿ ಬಿಜೆಪಿಗೆ ಬೆಂಬಲ ನೀಡಬೇಕು ಎಂಬುದು ನನ್ನ ಅಭಿಪ್ರಾಯ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು