ಭಾನುವಾರ, ಆಗಸ್ಟ್ 1, 2021
20 °C
ರಾಜ್ಯದಲ್ಲಿ ಮುಂದುವರಿದ ಮಳೆಯ ಅಬ್ಬರ

ಜಲಾಶಯಗಳಲ್ಲಿ ಹೆಚ್ಚಿದ ಒಳಹರಿವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ. ಕೆಲವೆಡೆ ನದಿಗಳು ಅಪಾಯದ ಮಟ್ಟ ತಲುಪಿವೆ. ತುಂಗಭದ್ರಾ, ಭದ್ರಾ, ಕಬಿನಿ, ಆಲಮಟ್ಟಿ ಸೇರಿದಂತೆ ಪ್ರಮುಖ ಜಲಾಶಯಗಳಲ್ಲಿ ನೀರಿನ ಒಳಹರಿವು ಹೆಚ್ಚಾಗಿದೆ.

ನೆರೆಯ ಮಹಾರಾಷ್ಟ್ರ ಮತ್ತು ಬೆಳಗಾವಿಯ ಚಿಕ್ಕೋಡಿ ತಾಲ್ಲೂಕಿನ ಜಲಾನಯನ ಪ್ರದೇಶಗಳಲ್ಲಿ ಮಳೆ ಮುಂದುವರಿದಿದ್ದು, ಚಿಕ್ಕೋಡಿಯ ಕಲ್ಲೋಳ ಬಳಿ ಕೃಷ್ಣಾ ನದಿಗೆ 1.15 ಲಕ್ಷ ಕ್ಯುಸೆಕ್ ನೀರು ಶನಿವಾರ ಹರಿದು ಬಂದಿದೆ. ಘಟಪ್ರಭಾ ಜಲಾಶಯದ ನೀರಿನ ಮಟ್ಟ ಒಂದೇ ದಿನದಲ್ಲಿ 10 ಅಡಿ ಹೆಚ್ಚಾಗಿದೆ.

ನಿಪ್ಪಾಣಿ ತಾಲ್ಲೂಕಿನ ಸಿದ್ನಾಳ ಹತ್ತಿರ ವೇದಗಂಗಾ ನದಿಯಲ್ಲಿ ಸಿಲುಕಿದ್ದ ವ್ಯಕ್ತಿಯನ್ನು ಎನ್‌ಡಿಆರ್‌ಎಫ್‌ ತಂಡ ರಕ್ಷಿಸಿದೆ.  ಸವದತ್ತಿ ತಾಲ್ಲೂಕಿನ ಯಕ್ಕುಂಡಿಯಲ್ಲಿ ಮೀನುಗಾರಿಕೆಗೆ ಹೋಗಿದ್ದಾಗ ತೆಪ್ಪ ಮಗುಚಿ ಶುಕ್ರವಾರ ನಾಪತ್ತೆಯಾಗಿದ್ದ ಕುಸುಮಾನಾ ಅತ್ತಾರ (52) ಎನ್ನುವವರ ಮೃತ ದೇಹ ಶನಿವಾರ ಪತ್ತೆಯಾಯಿತು. ಬೆಳಗಾವಿ ತಾಲ್ಲೂಕಿನ ಕಾಕತಿ ಬಳಿ ಮಾರ್ಕಂಡೇಯ ನದಿ ಪ್ರವಾಹದಲ್ಲಿ ಕೊಚ್ಚಿ ಹೋಗಿರುವ ವ್ಯಕ್ತಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಕೃಷ್ಣಾ ಮತ್ತು ಉಪ ನದಿಗಳ ಹರಿವಿ‌ನಲ್ಲಿ ನಿರಂತರ ಏರಿಕೆ  ಕಂಡುಬರುತ್ತಿದೆ. ದೂಧ್‌ಗಂಗಾ ನದಿಯಿಂದ 27,280 ಕ್ಯುಸೆಕ್ ಮತ್ತು ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್‌ನಿಂದ 88,500 ಕ್ಯುಸೆಕ್ ಸೇರಿದಂತೆ ಒಟ್ಟು 1,15,780 ಕ್ಯುಸೆಕ್ ನೀರು ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬಳಿ ಕೃಷ್ಣೆಗೆ ಸೇರುತ್ತಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು