ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಕ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿಯಿಂದ ಕಡಿತವಾಗಿದ್ದ ತೆರಿಗೆ ವಾಪಸ್‌

Last Updated 13 ಅಕ್ಟೋಬರ್ 2022, 15:30 IST
ಅಕ್ಷರ ಗಾತ್ರ

ಬೆಂಗಳೂರು: ಶಿಕ್ಷಕ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿಯಿಂದ ಕಡಿತವಾಗಿದ್ದ ₹14 ಕೋಟಿ ತೆರಿಗೆ ಹಣವನ್ನು ಆದಾಯ ತೆರಿಗೆ ಇಲಾಖೆ ಬಡ್ಡಿ ಸಹಿತ ಮರಳಿಸಿದೆ.

ಕ್ಷೇಮಾಭಿವೃದ್ಧಿ ನಿಧಿ ಸಂಗ್ರಹದಲ್ಲಿದ್ದ ₹ 150 ಕೋಟಿಯಲ್ಲಿ ತೆರಿಗೆ ಹಣವನ್ನು ಆದಾಯ ತೆರಿಗೆ ಇಲಾಖೆ ಪಡೆದುಕೊಂಡಿತ್ತು. ಈ ಹಣ ವಿದ್ಯಾರ್ಥಿ ಹಾಗೂ ಶಿಕ್ಷಕರಿಂದಲೇ ಸಂಗ್ರಹಿಸಿದ್ದ ಹಣವಾದ ಕಾರಣ, ಅದು ಆದಾಯದ ವ್ಯಾಪ್ತಿಗೆ ಬರುವುದಿಲ್ಲ ಎಂದು ಶಿಕ್ಷಣ ಇಲಾಖೆ ಕೋರ್ಟ್‌ ಮೆಟ್ಟಿಲೇರಿತ್ತು. ಕೋರ್ಟ್ ಬಡ್ಡಿ ಸೇರಿಸಿ, ₹ 18.50 ಕೋಟಿ ಮರಳಿಸಲು ಆದೇಶ ನೀಡಿತ್ತು.

ಈ ಹಣವೂ ಸೇರಿದಂತೆ ಖಾತೆಯಲ್ಲಿ ₹ 31 ಕೋಟಿ ಇದ್ದು, ಶಿಕ್ಷಕರು, ವಿದ್ಯಾರ್ಥಿಗಳಿಗೆ ಖರ್ಚು ಮಾಡಲು ಕ್ರಿಯಾ ಯೋಜನೆ ರೂಪಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯುಕ್ತ ವಿಶಾಲ್‌ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT