ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾರ್ಮೆಂಟ್ಸ್ ಉದ್ಯಮದಲ್ಲಿ ಲೈಂಗಿಕ ದೌರ್ಜನ್ಯ ಹೆಚ್ಚಳ: ಪ್ರಮೀಳಾ ನಾಯ್ಡು

ಮದುವೆ ವಯಸ್ಸು 21 ವರ್ಷಕ್ಕೆ ನಿಗದಿ: ರಾಜ್ಯ ಮಹಿಳಾ ಆಯೋಗ ಸ್ವಾಗತ
Last Updated 21 ಡಿಸೆಂಬರ್ 2021, 19:45 IST
ಅಕ್ಷರ ಗಾತ್ರ

ಬಾಗಲಕೋಟೆ: ‘ರಾಜ್ಯದಲ್ಲಿ ಗಾರ್ಮೆಂಟ್ಸ್ ಉದ್ಯಮದಲ್ಲಿ ಹೆಣ್ಣು ಮಕ್ಕಳ ಮೇಲೆ ಹೆಚ್ಚಿನ ಪ್ರಮಾಣದಲ್ಲಿ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ. ಕೆಲಸ ಕಳೆದುಕೊಳ್ಳುವ ಭಯ ಹಾಗೂ ಕಾನೂನಿನ ತಿಳಿವಳಿಕೆ ಇಲ್ಲದ ಕಾರಣ ತೊಂದರೆಗೀಡಾದವರು ದೂರು ನೀಡಲು ಮುಂದೆ ಬರುತ್ತಿಲ್ಲ’ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಗಾರ್ಮೆಂಟ್ಸ್ ಉದ್ಯಮದಲ್ಲಿ ದೌರ್ಜನ್ಯಕ್ಕೆ ತುತ್ತಾಗುವವರಲ್ಲಿ ಹೆಚ್ಚಾಗಿ ಮಧ್ಯಮ ಹಾಗೂ ಕೆಳಮಧ್ಯಮ ವರ್ಗದ ಮಹಿಳೆಯರು ಇದ್ದಾರೆ. ಆಯೋಗವು ಹೆಚ್ಚು ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ’ ಎಂದರು.

ಕೆಲಸದ ಸ್ಥಳದಲ್ಲಿ ಆರೋಗ್ಯಕರ ವಾತಾವರಣ ಇರುವಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ ಪ್ರಮೀಳಾ ನಾಯ್ಡು, ‘ಮಹಿಳೆಯರ ರಕ್ಷಣೆಗೆ ಆಯೋಗ ಬದ್ಧವಾಗಿದೆ. ತೊಂದರೆಗೀಡಾದವರುಯಾವುದೇ ಹಿಂಜರಿಕೆ ಇಲ್ಲದೇ ದೂರು ಕೊಡಿ’ ಎಂದು ಮನವಿ ಮಾಡಿದರು.

‘ಹೆಣ್ಣುಮಕ್ಕಳ ಮದುವೆ ವಯಸ್ಸನ್ನು 21 ವರ್ಷಕ್ಕೆ ಹೆಚ್ಚಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ರಾಜ್ಯ ಮಹಿಳಾ ಆಯೋಗ ಖಂಡಿತವಾಗಿಯೂ ಸ್ವಾಗತಿಸಲಿದೆ. ಆ ವಯಸ್ಸಿಗೆ ಹೆಣ್ಣು ಮಕ್ಕಳು ಮಾನಸಿಕವಾಗಿ, ದೈಹಿಕವಾಗಿ ಸದೃಢರು ಆಗಲಿದ್ದು, ಪದವಿ ಪೂರೈಸುವುದರಿಂದ ಯಾವುದಾದರೂ ಕೆಲಸ ಮಾಡಿ ಕುಟುಂಬವನ್ನು ಸಲಹುವ ಶಕ್ತಿ ಹೊಂದಿರುತ್ತಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT