ಬೆಂಗಳೂರು: ಭಾರತೀಯ ವಿಜ್ಞಾನ ಸಂಸ್ಥೆ ಅಭಿವೃದ್ಧಿಪಡಿಸಿರುವ ದೇಶದ ಪ್ರಥಮ ಮತ್ತು ಏಕೈಕ ಐಸಿಎಂಆರ್ ಅನುಮೋದಿತ ಮೊಬೈಲ್ ಆರ್ಟಿ–ಪಿಸಿಆರ್ ಕೋವಿಡ್ ಪರೀಕ್ಷಾ ಲ್ಯಾಬ್ ಅನ್ನು ರಾಜೀವ್ಗಾಂಧಿ ಆರೋಗ್ಯ ವಿಶ್ವವಿದ್ಯಾಲಯಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹಸ್ತಾಂತರಿಸಿದರು.

ಬಯೋ ಸುರಕ್ಷತೆ ಪ್ರಮಾಣೀಕರಣ ಹೊಂದಿರುವ ಅತ್ಯಂತ ಸುಸಜ್ಜಿತ ಮೊಬೈಲ್ ಕೋವಿಡ್ ಪರೀಕ್ಷಾ ಲ್ಯಾಬ್ ಇದಾಗಿದ್ದು. ಕೇವಲ ನಾಲ್ಕು ಗಂಟೆಗಳಲ್ಲಿ ಪರೀಕ್ಷಾ ವರದಿಯನ್ನು ಪಡೆಯಬಹುದು. ದಿನಕ್ಕೆ 400 ಪರೀಕ್ಷೆಗಳನ್ನು ನಡೆಸುವ ಸಾಮರ್ಥ್ಯ ಹೊಂದಿರುವ ಈ ಲ್ಯಾಬ್ ಅನ್ನು ಕಂಟೈನ್ಮೆಂಟ್ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆ ನಡೆಸಲು ಬಳಸಬಹುದಾಗಿದೆ.

ಕಾರ್ಯಕ್ರಮದಲ್ಲಿ ಐಐಎಸ್ಸಿ ನಿರ್ದೇಶಕ ಪ್ರೊ.ಜಿ.ರಂಗರಾಜನ್ ಮತ್ತು ರಾಜೀವ್ಗಾಂಧಿ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಸಚ್ಚಿದಾನಂದ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.