ಬಿಎಸ್ವೈ ಮೊಮ್ಮಗಳ ಸಾವು: ರಣದೀಪ್ ಸುರ್ಜೇವಾಲ ಸಂತಾಪ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮೊಮ್ಮಗಳು ಸೌಂದರ್ಯ ಅವರ ಸಾವಿಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ ಸಂತಾಪ ಸೂಚಿಸಿದ್ದಾರೆ.
‘ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಇಡೀ ಕುಟುಂಬದವರಿಗೆ ನನ್ನ ಸಂತಾಪಗಳು. ಇಷ್ಟು ಚಿಕ್ಕ ವಯಸ್ಸಿನ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಳ್ಳುವ ನೋವು ಪದಗಳನ್ನೂ ಮೀರಿದ್ದು. ದೇವರು ಅಗಲಿದ ಆತ್ಮಕ್ಕೆ ಚಿರಶಾಂತಿ ನೀಡಲಿ ಮತ್ತು ಅವರ ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ’ ಎಂದು ಸುರ್ಜೇವಾಲ ಟ್ವೀಟ್ ಮಾಡಿದ್ದಾರೆ.
ಬಿ.ಎಸ್.ಯಡಿಯೂರಪ್ಪ ಮೊಮ್ಮಗಳ ಸಾವು: ಆತ್ಮಹತ್ಯೆ ಶಂಕೆ
ಯಡಿಯೂರಪ್ಪ ಅವರ ಮೊಮ್ಮಗಳು ಸೌಂದರ್ಯ (30) ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದು, ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.
‘ಸೌಂದರ್ಯ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದ್ದು, ತನಿಖೆಯಿಂದಲೇ ನಿಖರ ಮಾಹಿತಿ ತಿಳಿಯಬೇಕಿದೆ. ಪತಿ ಹಾಗೂ ಕುಟುಂಬದವರು ನೀಡಿರುವ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಹೈಗ್ರೌಂಡ್ಸ್ ಠಾಣೆ ಮೂಲಗಳು ಹೇಳಿವೆ.
ಮಕ್ಕಳ ಸಾವಿನ ನೋವು ಕಂಡಿದ್ದೇನೆ: ಬಿಎಸ್ವೈ ಮೊಮ್ಮಗಳ ಸಾವಿಗೆ ಸಿದ್ದರಾಮಯ್ಯ ಕಂಬನಿ
ಈ ಮಧ್ಯೆ, ಪ್ರಧಾನಿ ನರೇಂದ್ರ ಮೋದಿ ಅವರು ಯಡಿಯೂರಪ್ಪ ಅವರಿಗೆ ದೂರವಾಣಿ ಕರೆ ಮಾಡಿ ಸಾಂತ್ವನ ಹೇಳಿದ್ದಾರೆ. ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಸಂತಾಪ ಸೂಚಿಸಿದ್ದಾರೆ.
ಮೊಮ್ಮಗಳ ಸಾವು: ಬಿಎಸ್ವೈಗೆ ಕರೆ ಮಾಡಿ ಸಾಂತ್ವನ ಹೇಳಿದ ಪ್ರಧಾನಿ ಮೋದಿ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.