ಮಂಗಳವಾರ, ಜನವರಿ 19, 2021
17 °C

ಒಂದೇ ತಕ್ಕಡಿಯಲ್ಲಿ ಅಳೆಯುವುದೇ?: ವರ್ಗಾವಣೆ ಬಗ್ಗೆ ಡಿ. ರೂಪಾ ಅಸಮಾಧಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

D roopa

ಬೆಂಗಳೂರು: ತಮ್ಮ ವರ್ಗಾವಣೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಡಿ. ರೂಪಾ ಅವರು ಟ್ವೀಟ್ ಮಾಡಿದ್ದಾರೆ.

‘ಕರಕುಶಲ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ನನ್ನನ್ನು ವರ್ಗಾವಣೆ ಮಾಡಲಾಗಿದೆ. ಹೇಮಂತ್‌ ನಿಂಬಾಳ್ಕರ್ ವಿರುದ್ಧ ದೋಷಾರೋಪ ಸಲ್ಲಿಸಿದ್ದ ಸಿಬಿಐ, ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕಳೆದ ಡಿಸೆಂಬರ್‌ನಲ್ಲೇ (1 ವರ್ಷ ಆಯಿತು) ಶಿಫಾರಸು ಮಾಡಿದೆ. ಅಷ್ಟಾದರೂ ಶಿಸ್ತುಕ್ರಮ ತೆಗೆದುಕೊಂಡಿಲ್ಲ. ಇದೀಗ ನನ್ನನ್ನೂ ಹಾಗೂ ದೋಷಾರೋಪ ಪಟ್ಟಿ ಎದುರಿಸುತ್ತಿರುವ ಅಧಿಕಾರಿಯನ್ನು ಒಂದೇ ತಕ್ಕಡಿಯಲ್ಲಿ ಅಳೆಯಲಾಗುತ್ತಿದೆ’ ಎಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ರಾಜೀನಾಮೆ ಹಿಂಪಡೆದಿದ್ದ ರವೀಂದ್ರನಾಥ್‌ಗೆ ಬಡ್ತಿ

ಐಪಿಎಸ್ ಅಧಿಕಾರಿಗಳಾದ ಡಿ. ರೂಪಾ ಹಾಗೂ ಹೇಮಂತ್ ನಿಂಬಾಳ್ಕರ್ ಜೊತೆಯಲ್ಲೇ ಮತ್ತಷ್ಟು ಐಪಿಎಸ್ ಅಧಿಕಾರಿಗಳನ್ನು ಗುರುವಾರ ವರ್ಗಾವಣೆ ಮಾಡಲಾಗಿದೆ. ಇನ್ನು 37 ಐಪಿಎಸ್ ಅಧಿಕಾರಿಗಳಿಗೆ ಬಡ್ತಿಯನ್ನೂ ನೀಡಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು