ಭಾನುವಾರ, ಮಾರ್ಚ್ 26, 2023
23 °C

ವಿದೇಶದಲ್ಲಿ ವೈದ್ಯ ಪದವಿ ಪಡೆದು ಬಂದವರು ಇಲ್ಲಿ ಪಾಸಾಗುವುದಿಲ್ಲ: ಪ್ರಲ್ಹಾದ ಜೋಶಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ವಿದೇಶದಲ್ಲಿ ವೈದ್ಯಕೀಯ ಪದವಿಯನ್ನು ಪಡೆದು ಬರುವ ಶೇ 90ರಷ್ಟು ವಿದ್ಯಾರ್ಥಿಗಳು ಇಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಲು ಅಗತ್ಯವಿರುವ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದಿಲ್ಲ’ ಎಂದು ಕೇಂದ್ರದ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.

ಇಲ್ಲಿನ ಸಾಂಬ್ರಾ ವಿಮಾನನಿಲ್ದಾಣದಲ್ಲಿ ಸೋಮವಾರ ಮಾತನಾಡಿದ ಸಂದರ್ಭದಲ್ಲಿ ಈ ಹೇಳಿಕೆ ನೀಡಿರುವ ಅವರು, ‘ವಿದೇಶದಲ್ಲಿನ ಹಾಗೂ ಭಾರತದಲ್ಲಿನ ವೈದ್ಯಕೀಯ ಶಿಕ್ಷಣಕ್ಕಾಗಿ ತಗಲುವ ವೆಚ್ಚ ಎಷ್ಟೇ ಇರಲಿ ಆ ಕುರಿತು ಈಗ ವಿವರವಾದ ಚರ್ಚೆ ಬೇಡ. ಆ ಚರ್ಚೆಗೆ ಇದು ಸಮಯವೂ ಅಲ್ಲ’ ಎಂದಿದ್ದಾರೆ.

‘ವೈದ್ಯಕೀಯ ಪದವಿಗೆ ಭಾರತದಲ್ಲಿ ಜಾಸ್ತಿ ಖರ್ಚಾಗುತ್ತದೆ, ಉಕ್ರೇನ್‌ನಲ್ಲಿ ಕಡಿಮೆ ಖರ್ಚಾಗುತ್ತದೆ ಹೀಗಾಗಿ ಹೋಗುತ್ತಾರೆ ಎಂಬ ಮಾತಿದೆಯಲ್ಲಾ’ ಎಂಬ ಪ್ರಶ್ನೆಗೆ, ‘ವೆಚ್ಚದ ಹೋಲಿಕೆ ಮಾಡಲು ನಾನು ಬಯಸುವುದಿಲ್ಲ. ಯಾವುದೇ ವಿವಾದ ಅಥವಾ ಚರ್ಚೆಗೆ ಈಗ ಬಯಸುವುದಿಲ್ಲ. ಅಲ್ಲಿ ಕಲಿತು ಬಂದವರಿಗೆ ಒಳ್ಳೆಯದಾಗಲಿ ಎಂದಷ್ಟೇ ಹಾರೈಸಬಲ್ಲೆ’ ಎಂದು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು