ಸೋಮವಾರ, ಡಿಸೆಂಬರ್ 5, 2022
26 °C

ಭಾರತ್ ಜೋಡೊ ಯಾತ್ರೆ: ರಾಹುಲ್ ಗಾಂಧಿ ಜತೆ ಹೆಜ್ಜೆ ಹಾಕಿದ ಕವಿತಾ, ಇಂದಿರಾ ಲಂಕೇಶ್

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಭಾರತ್ ಜೋಡೊ ಪಾದಯಾತ್ರೆಯಲ್ಲಿ ಪತ್ರಕರ್ತೆ ದಿವಂಗತ ಗೌರಿ ಲಂಕೇಶ್ ಅವರ ತಾಯಿ ಇಂದಿರಾ ಲಂಕೇಶ್ ಮತ್ತು ಕವಿತಾ ಲಂಕೇಶ್ ಭಾಗವಹಿಸುವ ಮೂಲಕ ಗಮನ ಸೆಳೆದಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ರಾಹುಲ್‌ ಗಾಂಧಿ, ‘ಗೌರಿ ಸತ್ಯದ ಪರ ನಿಂತಿದ್ದರು, ಗೌರಿ ಧೈರ್ಯದ ಪರ ನಿಂತಿದ್ದರು, ಗೌರಿ ಸ್ವಾತಂತ್ರ್ಯದ ಪರ ನಿಂತಿದ್ದರು... ಭಾರತದ ನಿಜವಾದ ಆತ್ಮವನ್ನು ಪ್ರತಿನಿಧಿಸುವ ಗೌರಿ ಲಂಕೇಶ್ ಮತ್ತು ಅವರಂತಹ ಅಸಂಖ್ಯಾತ ಇತರರ ಪರವಾಗಿ ನಾನು ನಿಲ್ಲುತ್ತೇನೆ’ ಎಂದು ಬರೆದುಕೊಂಡಿದ್ದಾರೆ. 

ಭಾರತ್ ಜೋಡೊ ಯಾತ್ರೆ ಎಂಬುದು ಜನರ ಧ್ವನಿಯಾಗಿದೆ. ಅದನ್ನು ಮೌನಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ರಾಹುಲ್ ಹೇಳಿದ್ದಾರೆ. 

ಸದ್ಯ ಪಾದಯಾತ್ರೆಯೂ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನಲ್ಲಿ ಸಾಗುತ್ತಿದ್ದು, ರಾಹುಲ್‌ ಗಾಂಧಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಸಾಥ್ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು