ಶಿವರಾಜ್ ಕುಮಾರ್ ಕನ್ನಡಪರ ಹೋರಾಟದ ನೇತೃತ್ವ ವಹಿಸಲಿ: ಇಂದ್ರಜಿತ್ ಲಂಕೇಶ್

ಮೈಸೂರು: ‘ಕನ್ನಡ ಭಾಷೆಯ ವಿಚಾರದಲ್ಲಿ ಸಿನಿಮಾ ನಟರು ಕೇವಲ ಟ್ವೀಟ್ ಮಾಡಿ ಸುಮ್ಮನಾಗಬಾರದು. ನಟ ಶಿವರಾಜ್ ಕುಮಾರ್ ನೇತೃತ್ವ ವಹಿಸಿ ಬೀದಿಗಿಳಿದು ಹೋರಾಟ ನಡೆಸಬೇಕು’ ಎಂದು ಪತ್ರಕರ್ತ ಹಾಗೂ ನಿರ್ದೇಶಕ ಇಂದ್ರಜಿತ್ ಲಂಕೇಶ್ ಹೇಳಿದರು.
‘ಸಿನಿಮಾದವರು ಬೆಳಗಾವಿಗೆ ಹೋಗಿ ಹೋರಾಟಕ್ಕೆ ಬೆಂಬಲ ನೀಡಬೇಕು. ಸಿನಿಮಾ ರಂಗದಲ್ಲಿ ನಾಯಕತ್ವದ ಕೊರತೆ ಇದೆ. ಡಾ.ರಾಜ್‌ಕುಮಾರ್, ಅಂಬರೀಶ್ ನಂತರ ನಾಯಕತ್ವ ಇಲ್ಲದಂತಾಗಿದೆ. ಕನ್ನಡ ಹೋರಾಟಕ್ಕೆ ಬನ್ನಿ ಎಂದು ಕರೆಯಬೇಕಾದ ದುಸ್ಥಿತಿ ಎದುರಾಗಿದೆ. ಸಿನಿಮಾ ರಂಗಕ್ಕೆ ಉತ್ತಮ ನಾಯಕತ್ವದ ಅವಶ್ಯವಿದ್ದು, ಶಿವರಾಜ್ ಕುಮಾರ್ ನಾಯಕತ್ವ ವಹಿಸಿಕೊಳ್ಳಬೇಕು’ ಎಂದು ಭಾನುವಾರ ಇಲ್ಲಿ ತಿಳಿಸಿದರು.
ಶಿವಾಜಿಗೆ ಮಸಿ, ಕನ್ನಡ ಧ್ವಜಕ್ಕೆ ಬೆಂಕಿ ಇಟ್ಟಿದ್ದು ಕಾಂಗ್ರೆಸ್ನವರು: ಬಿಜೆಪಿ
‘ಗೋಕಾಕ್ ಚಳುವಳಿಗೆ ಡಾ.ರಾಜ್‌ಕುಮಾರ್ ಅವರನ್ನು ಕರೆ ತಂದಿದ್ದು ನಮ್ಮ ತಂದೆ ಲಂಕೇಶ್. ಡಾ.ರಾಜ್ ಅನುಮತಿ ಇಲ್ಲದೆಯೇ ‘ಗೋಕಾಕ್ ಹೋರಾಟಕ್ಕೆ ರಾಜ್’ ಎಂಬ ಲೇಖನ ಬರೆದಿದ್ದರು. ನಂತರ ಡಾ.ರಾಜ್ ಹೋರಾಟಕ್ಕೆ ಬಂದಿದ್ದರು’ ಎಂದರು.
ಡಬ್ಬಿಂಗ್ ವಿರೋಧಿ: ‘ಇತ್ತೀಚಿನ ದಿನಗಳಲ್ಲಿ ಬೇರೆ ಭಾಷೆಯ ಸಿನಿಮಾಗಳು ಕನ್ನಡಕ್ಕೆ ಡಬ್ಬಿಂಗ್ ಆಗುತ್ತಿವೆ. ಇದರಿಂದ ಕನ್ನಡದವರು ಡಬ್ಬಿಂಗ್ ಕಲಾವಿದರಾಗಿ ಆಗಿ ಉಳಿಯಲಿದ್ದಾರೆ. ಸಿನಿಮಾ ಡಬ್ಬಿಂಗ್ ವಿಚಾರವಾಗಿಯೂ ಹೋರಾಟ ಆಗಬೇಕಿದೆ. ಕನ್ನಡ ಭಾಷೆಯ ಉಳಿವಿಗಾಗಿ ಬೀದಿಗೀಳಿದು ಹೋರಾಟ ಮಾಡಬೇಕಿದೆ’ ಎಂದು ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.