ಬೆಂಗಳೂರು: ನವೀನ ಕೃಷಿ ತಂತ್ರಜ್ಞಾನ ರೈತರ ಸಮಸ್ಯೆಗಳನ್ನು ಪರಿಹರಿಸಬಲ್ಲದು ಹಾಗೂ ಕೃಷಿ ಕ್ಷೇತ್ರದಲ್ಲಿ ಯುವ ಸಮುದಾಯಕ್ಕೆ ಅವಕಾಶವನ್ನು ಸೃಷ್ಟಿಸಬಲ್ಲದು ಎಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ.

ವಿಕಾಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ 'ಕೃಷಿ ನವೋದ್ಯಮ' (ಅಗ್ರಿ ಸ್ಟಾರ್ಟಪ್) ಸಮ್ಮೇಳನ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ಅವರು 2014 ರಿಂದ ಕೇಂದ್ರ ಸರ್ಕಾರವನ್ನು ಮುನ್ನಡೆಸುತ್ತಿದ್ದು, ಮೋದಿಯವರಿಂದಾಗಿ ದೇಶದಲ್ಲಿ ಸ್ಟಾರ್ಟಪ್‌ಗಳ ಯುಗ ಆರಂಭವಾಯಿತು. 2018 ರ ಹೊತ್ತಿಗೆ ದೇಶದಲ್ಲಿ 50 ಸಾವಿರ ನವೋದ್ಯಮಗಳು, ಹಾಗೂ ಬಳಿಕ 9,300 ಸ್ಟಾರ್ಟಪ್‌ಗಳು ಪ್ರಾರಂಭವಾದವು. ಇವುಗಳ ಪೈಕಿ 474 ಕೃಷಿ ಉದ್ಯಮಗಳು ಆರಂಭವಾಗಿವೆ. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಕೃಷಿ ಕ್ಷೇತ್ರಕ್ಕೆ ನವಚೈತನ್ಯವನ್ನು ಒದಗಿಸಲು ಕೃಷಿ ಸ್ಟಾರ್ಟಪ್‌ಗಳನ್ನು ಆರಂಭಿಸಿ ರೈತರು ಹಾಗೂ ಗ್ರಾಹಕರಿಗೆ ಅನುಕೂಲ ಕಲ್ಪಿಸಲು ವೇದಿಕೆ ಸೃಷ್ಟಿಸಲಾಗಿದೆ ಎಂದರು.

ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ 4 ಸಾವಿರ ಸ್ಟಾರ್ಟಪ್‌ಗಳನ್ನು ಆರಂಭಿಸಲಾಗುತ್ತಿದೆ. ದೇಶದ ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳು ಈಗಾಗಲೇ ಆರಂಭಿಕ ನೀತಿಗಳನ್ನು ಹೊರತಂದಿದೆ. ಇದರಿಂದಾಗಿ ವಾರ್ಷಿಕವಾಗಿ 4,000 ನವೋದ್ಯಮ ಸೃಷ್ಟಿಸಲು ಅನುಕೂಲವಾಗಿದೆ. ಸ್ಟಾರ್ಟಪ್‌ಗಳು ಯುವಕರಿಗೆ 1.7 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸಿದೆ. ಭಾರತದಲ್ಲಿ ಕೃಷಿ ನವೋದ್ಯಮ ಪ್ರಾರಂಭದ ಹಂತದಲ್ಲಿಯೇ ಆಕರ್ಷಿತವಾಗಿರುವುದು ಹೆಮ್ಮೆಯ ವಿಚಾರ. ಅಂಕಿಅಂಶಗಳ ಪ್ರಕಾರ ಪ್ರತಿದಿನ 2 ರಿಂದ 3 ಸ್ಟಾರ್ಟ್ಅಪ್‌ಗಳು ಭಾರತದಲ್ಲಿ ಸ್ಥಾಪನೆಯಾಗುತ್ತಿವೆ. ಅಕ್ಸೆಂಚರ್ ಕಂಪನಿಯು ಮಾಡಿದ ಸಮೀಕ್ಷೆಯ ಅಂದಾಜಿನ ಪ್ರಕಾರ, ನಮ್ಮ ದೇಶದಲ್ಲಿ ಅಗ್ರಿ ಸ್ಟಾರ್ಟ್ಅಪ್‌ಗಳಿಂದ 4.5 ಬಿಲಿಯನ್ ಡಾಲರ್ ಮಾರುಕಟ್ಟೆಯು ಸೃಷ್ಟಿ ಆಗಲಿದೆ ಎಂದು ಅಂದಾಜಿಸಲಾಗಿದೆ ಎಂದರು.

ಸ್ಟಾರ್ಟಪ್ ವ್ಯವಸ್ಥೆಗಳನ್ನು ಹೊಂದಿರುವ ವಿಶ್ವದ 20 ಅಗ್ರ ದೇಶಗಳಲ್ಲಿ ಬೆಂಗಳೂರು 15 ನೇ ಸ್ಥಾನವನ್ನು ಪಡೆದುಕೊಂಡಿದೆ. ಅಲ್ಲದೇ ಏಷ್ಯಾ ಖಂಡದಲ್ಲಿ ಸಿಂಗಾಪೂರ್ ಬಳಿಕ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವೆಂದು ಸಹ ಬೆಂಗಳೂರು ಗುರುತಿಸಲ್ಪಟ್ಟಿದೆ. ಕರ್ನಾಟಕ ರಾಜ್ಯ ಜೈವಿಕ ಹಾಗೂ ಸಿರಿಧಾನ್ಯಗಳ ಹಬ್ ಎಂದು ಕರೆಯಲ್ಪಟ್ಟಿದೆ. ಮಧ್ಯಾಹ್ನದ ಬಿಸಿಯೂಟದಲ್ಲಿ ಸಿರಿಧಾನ್ಯವನ್ನು ಪರಿಚಯಿಸಲು ಸರ್ಕಾರ ಚಿಂತನೆ ನಡೆಸಿದೆ. ಇದರಿಂದಾಗಿ ಕೃಷಿಕರಿಗೆ ಇನ್ನಷ್ಟು ಅನುಕೂಲವಾಗಲಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಜೀವರ್ಗಿ, ಹಿರಿಯೂರು, ಮಾಲೂರು ಹಾಗೂ ಬಾಗಲಕೋಟೆಯಲ್ಲಿ ಈಗಾಗಲೇ ಮೆಗಾಫುಡ್ ಪಾರ್ಕ್‌ಗಳಿದ್ದು, ಕೇಂದ್ರ ಸರ್ಕಾರದಡಿ ಕೆ.ಆರ್. ಪೇಟೆ ಹಾಗೂ ತುಮಕೂರಿನಲ್ಲಿ ಮೆಗಾಫುಡ್ ಪಾರ್ಕ್ ಆರಂಭಿಸಲಾಗಿದೆ. ಆ ಮೂಲಕ ಕೃಷಿ ಉತ್ಪಾದನಾ, ಆಹಾರ ಉತ್ಪಾದನಾ ಕ್ಷೇತ್ರಗಳಿಗೆ ರಾಜ್ಯದಲ್ಲಿ ಆದ್ಯತೆ ಕಲ್ಪಿಸಲಾಗಿದೆ. ಆತ್ಮ ನಿರ್ಭರ್ ಯೋಜನೆಯಡಿ ಆಹಾರ ಉತ್ಪಾದನಾ ಕೈಗಾರಿಕೆಗಳಿಗೆ ಅನುಕೂಲ ಕಲ್ಪಿಸಲಾಗಿದೆ ಎಂದು ವೆಬಿನಾರ್‌ನಲ್ಲಿ ಸಚಿವರು ಮಾಹಿತಿ ಹಂಚಿಕೊಂಡರು.

ಕೃಷಿ ನವೋದ್ಯಮದಲ್ಲಿ ಕೃಷಿ ಉತ್ಪಾದನ ಉದ್ಯಮಿಗಳು ದೇಶಾದ್ಯಂತ ಸಕ್ರಿಯವಾಗಿ ಭಾಗವಹಿಸಿರುವುದು ಖುಷಿ ತಂದಿದೆ. ಕೊರೊನಾ ವೈರಸ್‌ನಿಂದಾಗಿ ಬಿಕ್ಕಟ್ಟಿನ ಅವಧಿಯಲ್ಲಿ ರೈತರು ಬೆಳೆದ ತರಕಾರಿ ಹಣ್ಣು ಸೇರಿದಂತೆ ಕೃಷಿ ಫಸಲುಗಳು ನಾಶವಾಗದಂತೆ ರೈತರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಕೋಲ್ಡ್ ಸ್ಟೋರೇಜ್‌ಗಳನ್ನು ಆರಂಭಿಸಲಾಯಿತು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಬೆಂಬಲ ಸಹಕಾರ ಸೂಚನೆಯಡಿ ಕೃಷಿಕ್ಷೇತ್ರದಲ್ಲಿ ರೈತರಿಗೆ ಇನ್ನಷ್ಟು ಅನುಕೂಲ ಕಲ್ಪಿಸುವ ಹೊಸ ಹೊಸ ಯೋಜನೆಗಳನ್ನು ಜಾರಿಗೊಳಿಸಲಾಗುವುದು. ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಜ್‌ಕುಮಾರ್ ಕತ್ರಿ ಅವರ ಮೇಲ್ವಿಚಾರಣೆಯಲ್ಲಿ ಕೃಷಿ ಇಲಾಖೆ ಸಿಬ್ಬಂದಿ ಹಾಗೂ ಅಧಿಕಾರಿ ವರ್ಗಗಳು ಉದ್ಯಮಿಗಳಿಗಾಗಿ ಕೃಷಿ ನವೋದ್ಯಮ ವೇದಿಕೆ ಆಯೋಜಿಸಿರುವುದು ಸಂತಸ ಹಾಗೂ ಹೆಮ್ಮೆಯ ವಿಚಾರ ಎಂದರು.

ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕತ್ರಿ ಸ್ವಾಗತಿಸಿ, ಕೃಷಿ ಇಲಾಖೆ ಆಯುಕ್ತ ಬ್ರಿಜೆಷ್ ಕುಮಾರ್ ದೀಕ್ಷಿತ್ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.