ಮಂಗಳವಾರ, ಏಪ್ರಿಲ್ 20, 2021
32 °C

ಸದಾಶಿವ ಆಯೋಗದ ವರದಿ ಜಾರಿಗೆ ಒತ್ತಾಯ: ದಸಂಸದಿಂದ 6ರಂದು ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿಯು ಇದೇ 6ರಂದು ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.

‘ಹಿಂದುಳಿದ ಪರಿಶಿಷ್ಟ ಉಪ ಜಾತಿಗಳಿಗೆ ಸೌಲಭ್ಯ ಒದಗಿಸುವ ಉದ್ದೇಶದಿಂದ ಮಾದಿಗ, ಬೋವಿ, ಕೊರಮ, ಕೊರಚರಿಗೆ ಹಾಗೂ ಇತರರಿಗೆ ಒಟ್ಟು ಶೇ 15ರಷ್ಟು ಮೀಸಲಾತಿ ಸೌಲಭ್ಯ ನೀಡುವಂತೆ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯಲ್ಲಿ ಶಿಫಾರಸು ಮಾಡಲಾಗಿದೆ. ಇದನ್ನು ಅನುಷ್ಠಾನಕ್ಕೆ ತರಬೇಕು’ ಎಂದು ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ಡಾ.ಎ.ಎನ್. ಮೂರ್ತಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. 

‘2012 ಜೂನ್ 14ರಂದು ಆಯೋಗವು ತನ್ನ ವರದಿಯಲ್ಲಿ ಈ ಶಿಫಾರಸು ಮಾಡಿ ಸರ್ಕಾರಕ್ಕೆ ಕಳುಹಿಸಿದೆ. ಆದರೆ, ಈವರೆಗೆ ರಾಜ್ಯ ಸರ್ಕಾರವು ವರದಿಯನ್ನು ಜಾರಿಗೆ ತರದೆ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆ’ ಎಂದು ಅವರು ದೂರಿದರು. 

‘ನಗರದ ಮೈಸೂರು ಬ್ಯಾಂಕ್ ವೃತ್ತದಿಂದ ಮುಖ್ಯಮಂತ್ರಿಯವರ ನಿವಾಸದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು’ ಎಂದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು