ಗುರುವಾರ, 8 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

6– 12ನೇ ತರಗತಿವರೆಗೆ ಬೆಳಿಗ್ಗೆಯಿಂದ ಸಂಜೆವರೆಗೆ ಭೌತಿಕ ತರಗತಿಗೆ ಸೂಚನೆ: ನಾಗೇಶ್

Last Updated 1 ಅಕ್ಟೋಬರ್ 2021, 9:45 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ‘6ರಿಂದ 12ನೇ ತರಗತಿವರೆಗೆ ಬೆಳಿಗ್ಗೆಯಿಂದ ಸಂಜೆವರೆಗೆ ಭೌತಿಕ ತರಗತಿ ನಡೆಸುವಂತೆ ಮೌಖಿಕ ಸೂಚನೆ ನೀಡಲಾಗಿದೆ. ದಸರಾ ನಂತರ ಮುಂದಿನ ಕ್ರಮದ ಬಗ್ಗೆ ಯೋಚನೆ ಮಾಡುತ್ತೇವೆ’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಯಾವ ವಿದ್ಯಾರ್ಥಿಗೂ ತರಗತಿಗೆ ಹಾಜರಾಗುವಂತೆ ಬಲವಂತ ಮಾಡಬಾರದು ಎಂದು ತಿಳಿಸಿದ್ದೇವೆ. ಭೌತಿಕ ತರಗತಿ ಆರಂಭಿಸಿರುವುದು ವಿದ್ಯಾರ್ಥಿಗಳಿಗೂ ಖುಷಿಯಾಗಿದೆ’ ಎಂದು ಪ್ರತಿಕ್ರಿಯಿಸಿದರು.

‘ಬಹಳಷ್ಟು ಜಿಲ್ಲೆಗಳಲ್ಲಿ ಕೋವಿಡ್‌ ಪಾಸಿಟಿವಿಟಿ ಪ್ರಮಾಣ ಕಡಿಮೆಯಾಗಿದೆ. ಹಲವು ಜಿಲ್ಲೆಗಳಲ್ಲಿ ಈ ಪ್ರಮಾಣ ಸೊನ್ನೆಗೆ ಇಳಿದಿದೆ. ಹೀಗಾಗಿ, ಶಾಲೆ ನಡೆಸಲು ತೊಂದರೆ ಆಗುವುದಿಲ್ಲ’ ಎಂದು ಉತ್ತರಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT