ಬುಧವಾರ, ನವೆಂಬರ್ 25, 2020
24 °C

ಡಿಜೆ ಹಳ್ಳಿ ಗಲಭೆ ಪ್ರಕರಣ| ಸಂಪತ್‌ ರಾಜ್‌ಗಾಗಿ ತೀವ್ರಗೊಂಡ ಹುಡುಕಾಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿರುವ ಕಾಂಗ್ರೆಸ್ ಮುಖಂಡ ಆರ್. ಸಂಪತ್‌ ರಾಜ್ ಅವರಿಗಾಗಿ ಹುಡುಕಾಟ ತೀವ್ರಗೊಂಡಿದ್ದು, ಅವರು ನಗರದಲ್ಲೇ ಅವಿತುಕೊಂಡಿರುವ ಮಾಹಿತಿ ಸಿಸಿಬಿಗೆ ಸಿಕ್ಕಿದೆ.

‘ಶೀಘ್ರವೇ ಸಂಪತ್‌ ರಾಜ್‌ ಬಂಧನವಾಗಲಿದೆ’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಬುಧವಾರವಷ್ಟೇ ಹೇಳಿಕೆ ನೀಡಿದ್ದು, ಅದರ ಬೆನ್ನಲ್ಲೇ ಸಿಸಿಬಿ ಪೊಲೀಸರ ವಿಶೇಷ ತಂಡಗಳು ಹುಡುಕಾಟ ಚುರುಕುಗೊಳಿಸಿವೆ.

ಫ್ರೇಜರ್‌ಟೌನ್, ಪುಲಿಕೇಶಿನಗರ ಹಾಗೂ ಸುತ್ತಮುತ್ತ ಸ್ಥಳಗಳಲ್ಲಿ ಹಲವು ಮನೆಗಳಿಗೆ ತೆರಳಿ ಪೊಲೀಸರು ತಪಾಸಣೆ ನಡೆಸಿದ್ದಾರೆ. ಸಂಬಂಧಿಕರು, ಸ್ನೇಹಿತರು ಹಾಗೂ ಪಕ್ಷದ ಕಾರ್ಯಕರ್ತರನ್ನೂ ವಿಚಾರಣೆಗೆ ಒಳಪಡಿಸಿದ್ದಾರೆ.
ಸಿಸಿಬಿ ಎಸಿಪಿ ಹಾಗೂ ಇನ್‌ಸ್ಪೆಕ್ಟರ್‌ ಜೊತೆ ಗುರುವಾರ ಸಭೆ ನಡೆಸಿದ ಜಂಟಿ ಕಮಿಷನರ್ ಸಂದೀಪ್ ಪಾಟೀಲ, ಸಂಪತ್‌ ರಾಜ್‌ ಬಗ್ಗೆ ಸಿಕ್ಕ ಮಾಹಿತಿಯನ್ನು ಪರಿಶೀಲಿಸಿ ಕೆಲ ಸೂಚನೆಗಳನ್ನು ನೀಡಿದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು