ಬುಧವಾರ, 31 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳಾ ಸಬಲೀಕರಣಕ್ಕೆ ₹500 ಕೋಟಿ: ಸ್ತ್ರೀ ಸಾಮರ್ಥ್ಯ ನಮೋ ಸ್ತ್ರೀ ಯೋಜನೆಗೆ ಚಾಲನೆ

Last Updated 8 ಮಾರ್ಚ್ 2023, 19:31 IST
ಅಕ್ಷರ ಗಾತ್ರ

ಬೆಂಗಳೂರು: ಮಹಿಳಾ ಸಬಲೀಕರಣಕ್ಕೆ ಸರ್ಕಾರ ₹ 500 ಕೋಟಿ ನೆರವು ನೀಡಿದ್ದು, 50 ಸಾವಿರ ಸ್ವಸಹಾಯ ಗುಂಪುಗಳ ಬಲ ವರ್ಧನೆಗೆ ಹಲವು ಯೋಜನೆಗಳನ್ನು ರೂಪಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಕೌಶಲಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಬುಧವಾರ ಹಮ್ಮಿಕೊಂಡಿದ್ದ 'ಸ್ತ್ರೀ ಸಾಮರ್ಥ್ಯ ನಮೋ ಸ್ತ್ರೀ ಯೋಜನೆ'ಗೆ ಚಾಲನೆ ನೀಡಿ ಅವರು ಮಾತನಾಡಿದರು.

2022-23ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿದ್ದ ₹ 500 ಕೋಟಿ ವಿಶೇಷ ಸಮುದಾಯ ಬಂಡವಾಳ ನಿಧಿಯ ಮೊದಲ ಕಂತು ₹ 100 ಕೋಟಿ ಅನ್ನು ಫಲಾನುವಿಗಳ ಖಾತೆಗೆ ನೇರವಾಗಿ ಬಿಡುಗಡೆ ಮಾಡಲಾಗಿದೆ. ಉಳಿದ ಹಣವನ್ನು ಪ್ರತಿವಾರ ಕಂತುಗಳಲ್ಲಿ ಬಿಡುಗಡೆಗೊಳಿಸಿ, ಏಪ್ರಿಲ್ ತಿಂಗಳಲ್ಲಿ ಮಹಿಳಾ ಸ್ವಸಹಾಯ ಗುಂಪುಗಳ ಕಾರ್ಯ ಚಟುವಟಿಕೆಗಳಿಗೆ ಚಾಲನೆ ನೀಡಲಾಗುವುದು ಎಂದರು.

ಕೌಶಲಾಭಿವೃದ್ಧಿ ಹಾಗೂ ಜೀವನೋಪಾಯ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ, ರಾಜ್ಯ ಸರ್ಕಾರ 2023-24ನೇ ಸಾಲಿನ ಆಯವ್ಯಯದಲ್ಲಿ ಮಹಿಳೆಯರ ಸಬಲೀಕರಣ ಹಾಗೂ ಕ್ಷೇಮಾಭಿವೃದ್ಧಿಗೆ ₹ 46,278 ಕೋಟಿ ಅನುದಾನ ಒದಗಿಸಿದೆ. ಮಹಿಳಾ ಸ್ವಸಹಾಯ ಗುಂಪುಗಳಿಗೆ ₹ 1,800 ಕೋಟಿ ಸಾಲವನ್ನು ಶೂನ್ಯ ಬಡ್ಡಿ ದರದಲ್ಲಿ ವಿತರಿಸುವ ಗುರಿ ಇದೆ ಎಂದರು.

ಮೌಲ್ಯವರ್ಧನೆ, ಬ್ರ್ಯಾಂಡಿಂಗ್‌, ಪ್ಯಾಕಿಂಗ್ ಮತ್ತು ಮಾರುಕಟ್ಟೆ, ಕೇರಳದ ಕುಟುಂಬ ಶ್ರೀ ಸೇರಿದಂತೆ ಎಂಟು ಸಂಸ್ಥೆಗಳೊಂದಿಗೆ ತಾಂತ್ರಿಕ ಬೆಂಬಲ ಒಡಂಬಡಿಕೆ ಮಾಡಿಕೊಳ್ಳಲಾಯಿತು. ಉತ್ಪನ್ನಗಳ ಪ್ರದರ್ಶನ, ಮಾರಾಟಕ್ಕೂ ವ್ಯವಸ್ಥೆ
ಮಾಡಲಾಗಿತ್ತು.

ಜೀವನೋಪಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್‌.ಸೆಲ್ವಕುಮಾರ್‌, ಅಭಿಯಾನದ ನಿರ್ದೇಶಕಿ ರಾಗಪ್ರಿಯಾ, ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಸತೀಶ್‌ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT