ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಣ್ಣಿನ ಜೀವನದಲ್ಲಿ ಸಮಾನ ಅವಕಾಶ ಕಲ್ಪಿಸುವುದೇ ನಮ್ಮ ಸರ್ಕಾರದ ಗುರಿ: ಯಡಿಯೂರಪ್ಪ

Last Updated 8 ಮಾರ್ಚ್ 2021, 5:09 IST
ಅಕ್ಷರ ಗಾತ್ರ

ಬೆಂಗಳೂರು: ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ನಾಡಿನ ಸಮಸ್ತ ತಾಯಂದಿರಿಗೆ ಮತ್ತು ಸಹೋದರಿಯರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶುಭಾಶಯಗಳನ್ನು ಕೋರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಯಡಿಯೂರಪ್ಪ, ಪ್ರತಿಯೊಬ್ಬ ಹೆಣ್ಣಿನ ಜೀವನದಲ್ಲಿ ಸಕಾರಾತ್ಮಕ ಪರಿವರ್ತನೆ, ಸುರಕ್ಷತೆ ಮತ್ತು ಸಮಾನ ಅವಕಾಶ ಕಲ್ಪಿಸುವುದೇ ನಮ್ಮ ಸರ್ಕಾರದ ಗುರಿ ಎಂದು ಹೇಳಿದ್ದಾರೆ.

'ಈ ಅಂತಾರಾಷ್ಟ್ರೀಯ ಮಹಿಳಾ ದಿನದಂದು, ನಮ್ಮ ನಾರಿಶಕ್ತಿಯ ಧೈರ್ಯ, ಪರಿಶ್ರಮ, ಸಾಧನೆಗಳನ್ನು ಸಂಭ್ರಮಿಸೋಣ. ಅಭಿವೃದ್ಧಿಯ ಪಥದಲ್ಲಿ ಎಲ್ಲರನ್ನೂ ಹಿಂದಿಕ್ಕಿ, ಸಾಧಿಸುತ್ತಿರುವ ಮಹಿಳೆಯರು ಸಮಾಜದ ಹೆಮ್ಮೆಯಾಗಿದ್ದಾರೆ. ಪ್ರತಿಯೊಬ್ಬ ಹೆಣ್ಣಿನ ಜೀವನದಲ್ಲಿ ಸಕಾರಾತ್ಮಕ ಪರಿವರ್ತನೆ, ಸುರಕ್ಷತೆ ಮತ್ತು ಸಮಾನ ಅವಕಾಶ ಕಲ್ಪಿಸುವುದೇ ನಮ್ಮ ಸರ್ಕಾರದ ಗುರಿ' ಎಂದು ತಿಳಿಸಿದರು.

ತಮ್ಮ ಟ್ವೀಟ್‌ನಲ್ಲಿ ಸ್ತ್ರೀ ಮಹತ್ವವನ್ನು ಯಡಿಯೂರಪ್ಪ ಸಾರಿದ್ದಾರೆ. 'ಮನೆ ಮನೆಯಲ್ಲಿ ದೀಪ ಉರಿಸಿ, ಹೊತ್ತು ಹೊತ್ತಿಗೆ ಅನ್ನ ಉಣಿಸಿ ತಂದೆ ಮಗುವ ತಬ್ಬಿದಾಕೆ ನಿನಗೆ ಬೇರೆ ಹೆಸರೇ ಬೇಕೇ, ಸ್ತ್ರೀ ಎಂದರೆ ಅಷ್ಟೇ ಸಾಕೆ' ಎಂದು ಉಲ್ಲೇಖಿಸಿದ್ದಾರೆ.

ಏತನ್ಮಧ್ಯೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಮಧ್ಯಾಹ್ನ 2021-22ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT