ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿರಿಧಾನ್ಯಕ್ಕೆ ಜಾಗತಿಕ ಮನ್ನಣೆ ಸಿಗಲು ಕಾಂಗ್ರೆಸ್‌ ಕಾರಣ: ಎಸ್.ಆರ್.ಪಾಟೀಲ

Last Updated 13 ಮಾರ್ಚ್ 2021, 19:31 IST
ಅಕ್ಷರ ಗಾತ್ರ

ಬೆಂಗಳೂರು: ‘ಸಿರಿಧಾನ್ಯಕ್ಕೆ ಜಾಗತಿಕ ಮನ್ನಣೆ ಸಿಗಲು ಕಾಂಗ್ರೆಸ್ ಪಕ್ಷವೇ ಕಾರಣ’ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಕಡು ಬಡವನ ಆಹಾರ ಸಿರಿಧಾನ್ಯಕ್ಕೆ ಈಗ ಜಾಗತಿಕ ಮನ್ನಣೆ ಸಿಕ್ಕಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಘಟನೆ 2023ನ್ನು ‘ಅಂತರರಾಷ್ಟ್ರೀಯ ಸಿರಿಧಾನ್ಯಗಳ ವರ್ಷ’ವಾಗಿ ಆಚರಿಸುವುದಾಗಿ ಘೋಷಿಸಿದೆ’ ಎಂದಿದ್ದಾರೆ.

2017-18ರಲ್ಲಿ ಕೃಷಿ ಸಚಿವರಾಗಿದ್ದ ಕೃಷ್ಣಬೈರೇಗೌಡ,‘ಸಿರಿಧಾನ್ಯಕ್ಕೆ ಮನ್ನಣೆ ನೀಡುವಂತೆ ಕೇಂದ್ರಕ್ಕೆ ಪ್ರಸ್ತಾವ ಕಳುಹಿಸಿದ್ದರು. ಆಹಾರ ಮತ್ತು ಕೃಷಿ ಸಂಘಟನೆಯ ಆಹ್ವಾನದ ಮೇರೆಗೆ ರೋಮ್‌ನಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಸಿರಿಧಾನ್ಯಗಳ ಮಹತ್ವ ವಿವರಿಸಿ, ಸಿರಿಧಾನ್ಯಗಳ ವರ್ಷಾಚರಣೆ ಘೋಷಣೆಗೆ ಮನವಿ ಮಾಡಿದ್ದರು’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT