ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂತರರಾಜ್ಯ ಜಲವಿವಾದ | ದೆಹಲಿಯಲ್ಲಿ ಕಾನೂನು ತಜ್ಞರೊಂದಿಗೆ ಸಭೆ: ಸಿಎಂ ಬೊಮ್ಮಾಯಿ

Last Updated 24 ಆಗಸ್ಟ್ 2021, 7:43 IST
ಅಕ್ಷರ ಗಾತ್ರ

ಬೆಂಗಳೂರು:ಅಂತರರಾಜ್ಯ ಜಲ ವಿವಾದಗಳ ಬಗ್ಗೆ ನವದೆಹಲಿಯಲ್ಲಿ ಕಾನೂನು ತಜ್ಞರ ಜತೆಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಈ ವಿಷಯ ತಿಳಿಸಿದರು.

ರಾಜ್ಯ ಸರ್ಕಾರದ ಅಡ್ವೋಕೇಟ್ ಜನರಲ್, ರಾಜ್ಯದ ಹಿರಿಯ ವಕೀಲರು, ಕಾನೂನು ತಜ್ಞರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ.ನೀರಾವರಿ ವಿವಾದದ ಬಗ್ಗೆ ರಾಜ್ಯದ ಮುಂದಿನ ನಡೆ ಏನು ಎಂಬುದನ್ನು ಈ ಸಭೆಯಲ್ಲಿ ತೀರ್ಮಾನಿಸಲಾಗುವುದು.ಕರ್ನಾಟಕದ ನೆಲ, ಜಲ, ಭಾಷೆಯ ಹಿತರಕ್ಷಣೆಗೆ ಸರ್ವ ಪ್ರಯತ್ನ ಮಾಡಲಾಗುವುದು, ಈ ವಿಷಯದಲ್ಲಿ ಯಾವುದೇ ರೀತಿಯ ಆತಂಕ ಬೇಡ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಇದೇ ತಿಂಗಳ 25ರಂದು ನವದೆಹಲಿಗೆ ತೆರಳಿ, 26 ರಂದು ಎಲ್ಲ ಕೇಂದ್ರ ಸಚಿವರನ್ನು ಭೇಟಿ ಮಾಡಿ ರಾಜ್ಯದ ಅಭಿವೃದ್ಧಿಯ ಬಗ್ಗೆ ಚರ್ಚಿಸಲಾಗುವುದು.ಕೇಂದ್ರ ಆರೋಗ್ಯ, ಹಣಕಾಸು, ಜಲಶಕ್ತಿ, ಕೃಷಿ ಹಾಗೂ ರಕ್ಷಣಾ ಸಚಿವರ ಸಮಯ ಕೇಳಿದ್ದು, ಅವರನ್ನು ನವದೆಹಲಿಯಲ್ಲಿ ಭೇಟಿಯಾಗಲಿದ್ದೇನೆ ಎಂದು ತಿಳಿಸಿದರು.

ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇರುವ ತಜ್ಞರ ಸಮಿತಿ ಮುಂದುವರೆಯಲಿದೆ. ಕೇಂದ್ರ ವಿಪತ್ತು ನಿರ್ವಹಣಾ ಸಮಿತಿ ಆಕ್ಟೋಬರ್ ತಿಂಗಳಲ್ಲಿ ರಾಜ್ಯಕ್ಕೆ ಬರಬಹುದು. ಕೋವಿಡ್ ಮೂರನೇ ಅಲೆಯ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಲು ಕೋವಿಡ್ ತಜ್ಞರ ಸಮಿತಿ ಹಾಗೂ ಸಂಬಂಧ ಪಟ್ಟ ಸಚಿವರೊಂದಿಗೆ ಸಭೆ ನಡೆಸಲಾಗುವುದು ಎಂದೂ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT