ಗುರುವಾರ , ಮೇ 26, 2022
28 °C

ಆತ್ಮಾವಲೋಕನ ಸಭೆ ಫೆ. 24ಕ್ಕೆ: ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ

ಶಿರಸಿ: ಸಂಸದೀಯ ಮೌಲ್ಯಗಳ ಕುಸಿತ ತಡೆಯಲು ಫೆ.24 ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆತ್ಮಾವಲೋಕನ ಸಭೆ ಕರೆಯಲಾಗಿದೆ ಎಂದು ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, 'ಹಿರಿಯ ಸಂಸದೀಯ ಪಟುಗಳು, ಅನುಭವಿ ರಾಜಕೀಯ ಮುಖಂಡರು, ಕಾನೂನು ತಜ್ಞರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ' ಎಂದರು.
'ಸಂಸದೀಯ ಮೌಲ್ಯಗಳನ್ನು ಎತ್ತಿ ಹಿಡಿದು ಸದನದ ಘನತೆ ಹೆಚ್ಚಿಸುವ ಸಲುವಾಗಿ  ದೇಶದಲ್ಲೇ ಮೊದಲ ಬಾರಿಗೆ ಇಂತಹ ಸಭೆ ನಡೆಯುತ್ತಿದೆ' ಎಂದರು.

'ಸದನದಲ್ಲಿ ವಿಷಯಗಳ ಚರ್ಚೆ ಕುರಿತು ಗಂಭೀರತೆ ಕಡಿಮೆ ಆಗುತ್ತಿದೆ. ರಾಜಕೀಯ ಚಟುವಟಿಕೆಯೇ ಪ್ರಾಮುಖ್ಯತೆ ಪಡೆಯುತ್ತಿದೆ. ಇದನ್ನೆಲ್ಲ ತಡೆಗಟ್ಟಲು ಅಗತ್ಯ ಸಲಹೆಗಳನ್ನು ಸಭೆಯಲ್ಲಿ ನೀಡಲಾಗುವುದು' ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು