ಹೂಡಿಕೆದಾರರ ಅರ್ಜಿ ಆಯಾ ತಿಂಗಳಲ್ಲೇ ಪರಿಶೀಲನೆ: ಶೆಟ್ಟರ್

ಹುಬ್ಬಳ್ಳಿ: ರಾಜ್ಯದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸುವ ಉದ್ಯಮಿಗಳಿಗೆ ಅನುಕೂಲ ಕಲ್ಪಿಸಲು ಪರವಾನಗಿಗೆ ಸಲ್ಲಿಸಿದ ಅರ್ಜಿಗಳನ್ನು ಆಯಾ ತಿಂಗಳಲ್ಲೇ ಪರಿಶೀಲನೆ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಬೃಹತ್ ಮತ್ತು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿದರು.
ನೂತನ ಕೈಗಾರಿಕಾ ನೀತಿ 2020–25 ಮತ್ತು ಹೂಡಿಕೆ ಅವಕಾಶಗಳು ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಶನಿವಾರ ಮಾತನಾಡಿದ ಅವರು ‘ಮೊದಲು ಎರಡ್ಮೂರು ತಿಂಗಳಿಗೊಮ್ಮೆ ಅರ್ಜಿಗಳ ಪರಿಶೀಲನೆ ನಡೆಯುತ್ತಿತ್ತು. ಈಗ ಪ್ರತಿ ತಿಂಗಳು ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದರು.
ಮಸೂದೆ ಸಿದ್ಧ: ಧಾರವಾಡ, ಶಿವಮೊಗ್ಗ, ಕಲಬುರ್ಗಿ ಜಿಲ್ಲೆಗಳು ಹಾಗೂ ಇವುಗಳ ಅಕ್ಕಪಕ್ಕದ ಜಿಲ್ಲೆಗಳ ಗ್ರಾಮಗಳಲ್ಲಿ ಹೂಡಿಕೆಗೆ ಉತ್ತೇಜನ ನೀಡುವ ಸಲುವಾಗಿ ವಿಶೇಷ ಹೂಡಿಕೆ ವಲಯ ಮಾಡಲಾಗುವುದು. ಇದಕ್ಕಾಗಿ ಮಸೂದೆ ಸಿದ್ಧಪಡಿಸಲಾಗಿದ್ದು, ಅಧಿವೇಶನದಲ್ಲಿ ಮಂಡಿಸಿ ಒಪ್ಪಿಗೆ ಪಡೆಯಲಾಗುತ್ತದೆ ಎಂದು ಶೆಟ್ಟರ್ ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.