ಶುಕ್ರವಾರ, ಜುಲೈ 1, 2022
26 °C

ಪಿಎಸ್‌ಐ ನೇಮಕಾತಿ ಮರುಪರೀಕ್ಷೆ ಸ್ವಾಗತಿಸಿದ ಡಿ. ರೂಪಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪಿಎಸ್ಐ ನೇಮಕಾತಿಗೆ ಮರುಪರೀಕ್ಷೆ ನಿರ್ಧಾರದ ಮೂಲಕ ನೊಂದ ಅರ್ಹ ಅಭ್ಯರ್ಥಿಗಳಿಗೆ ಸರ್ಕಾರವು ನ್ಯಾಯ ಒದಗಿಸಿದೆ ಎಂದು ಐಪಿಎಸ್ ಅಧಿಕಾರಿ ಡಿ. ರೂಪಾ ಹೇಳಿದ್ದಾರೆ.
 
ನೇಮಕಾತಿ ಉಸ್ತುವಾರಿ ಹೊತ್ತಿರುವ  ಹಿರಿಯ ಅಧಿಕಾರಿಗಳಿಂದ ಹಿಡಿದು ಎಲ್ಲರಿಗೂ ಅಮಾನತು ಮುಂತಾದ ಶಿಸ್ತು ಕ್ರಮ(ಟ್ರಾನ್ಸ್‌ಫರ್ ಶಿಸ್ತುಕ್ರಮ ಅಲ್ಲ) ಆದಾಗ ಮಾತ್ರ ಮುಂದೆ ಇಂತಹ ಘಟನೆ ತಡೆಯಲು ಸಾಧ್ಯ. ಇಲ್ಲವಾದಲ್ಲಿ ಅಧಿಕಾರಿಗಳು ಆಡಿದ್ದೇ ಆಟ. ಎಂದು ‌ ಡಿ.ರೂಪಾ ಟ್ವೀಟ್ ಮಾಡಿದ್ದಾರೆ.

545 ಪಿಎಸ್ಐ ಹುದ್ದೆ ನೇಮಕಾತಿಗೆ ಮರುಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಿತ್ರದುರ್ಗದಲ್ಲಿ ಘೋಷಿಸಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 'ನೇಮಕಾತಿಗೆ ಸಂಬಂಧಿಸಿದ ನೋಟಿಫಿಕೇಷನ್ ರದ್ದುಪಡಿಸುವುದಿಲ್ಲ. ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಮಾತ್ರ ಮರು ಪರೀಕ್ಷೆ ನೀಡಲಾಗುವುದು. ಹೊಸ ಅಭ್ಯರ್ಥಿಗಳಿಗೆ ಅವಕಾಶವಿಲ್ಲ. ಅಕ್ರಮದ ವ್ಯಾಪಕತೆ ಪರಿಶೀಸಿ ಈ ತೀರ್ಮಾನ ಕೈಗೊಳ್ಳಲಾಗಿದೆ' ಎಂದು ಹೇಳಿದರು.

    ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

    ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

    ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

    ಈ ವಿಭಾಗದಿಂದ ಇನ್ನಷ್ಟು