ಐಪಿಎಸ್ ಅಧಿಕಾರಿ ಆರ್. ದಿಲೀಪ್ ನಿಧನ

ಬೆಂಗಳೂರು: ರಾಜ್ಯದ ಐಪಿಎಸ್ ಅಧಿಕಾರಿ ಆರ್. ದಿಲೀಪ್ (53) ಅವರು ಅನಾರೋಗ್ಯದಿಂದಾಗಿ ನಗರದ ಬನ್ನೇರುಘಟ್ಟ ರಸ್ತೆಯ ಅಪೋಲೊ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾದರು.
ಸಿಐಡಿ ಆರ್ಥಿಕ ವಿಭಾಗದ ಡಿಐಜಿಪಿ ಆಗಿ ಕೆಲಸ ಮಾಡುತ್ತಿದ್ದ ಇವರು, ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರು.
ಬಿಇ ಪದವೀಧರರಾಗಿದ್ದ ದಿಲೀಪ್ ಅವರು 2005ರಲ್ಲಿ ಪೊಲೀಸ್ ಸೇವೆಗೆ ಸೇರಿದ್ದರು. ಧಾರವಾಡ, ಉತ್ತರ ಕನ್ನಡ ಹಾಗೂ ಹಲವು ಜಿಲ್ಲೆಗಳ ಎಸ್ಪಿ ಆಗಿದ್ದರು. ಹುಬ್ಬಳ್ಳಿ–ಧಾರವಾಡ ಕಮಿಷನರ್ ಆಗಿಯೂ ಕೆಲಸ ಮಾಡಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.