ಮಂಗಳವಾರ, ಆಗಸ್ಟ್ 9, 2022
20 °C

ರೋಹಿಣಿ ನೈತಿಕತೆ ಪತನ: ಈಜುಕೊಳ ನಿರ್ಮಾಣದ ಬಗ್ಗೆ ಐಪಿಎಸ್‌ ಅಧಿಕಾರಿ ರೂಪಾ ಟೀಕೆ

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿ ನಿವಾಸದಲ್ಲಿ ಈಜುಕೊಳ ನಿರ್ಮಾಣ ಮಾಡಿದ ವಿವಾದದ ಹಿನ್ನೆಲೆಯಲ್ಲಿ ಐಪಿಎಸ್‌ ಅಧಿಕಾರ ರೂಪಾ ಮೌದ್ಗಿಲ್‌ ಅವರು ಬುಧವಾರ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಟೀಕೆ ಮಾಡಿದ್ದಾರೆ.

ಈ ಕುರಿತು ಬುಧವಾರ ಟ್ವೀಟ್‌ ಮಾಡಿರುವ ಅವರು, ‘ಕೊರೊನಾ ಸಂಕಷ್ಟದಿಂದ ಜನರು ತತ್ತರಿಸಿರುವ ಸಂದರ್ಭದಲ್ಲಿ ಸಾರ್ವಜನಿಕರ ಹಣ ಬಳಸಿ ಈಜುಕೊಳ ನಿರ್ಮಿಸಲು ಮುಂದಾಗಿದ್ದು, ಐಐಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅವರ ನೈತಿಕ ಪತನವನ್ನು ತೋರಿಸುತ್ತದೆ. ಈಜುಕೊಳ ನಿರ್ಮಾಣ ಕೆಲಸ ಮುಂದೂಡಬಹುದಿತ್ತು’ ಎಂದು ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ತಮ್ಮ ಫೇಸ್‌ಬುಕ್‌ ಹಾಗೂ ಟ್ವಿಟರ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಮೈಸೂರು ಡಿಸಿ ನಿವಾಸದಲ್ಲಿ ಅನುಮತಿಯಿಲ್ಲದೇ ಈಜುಕೊಳ ನಿರ್ಮಾಣ: ತನಿಖಾ ವರದಿ

ಇನ್ನು ಈಜುಕೊಳ ನಿರ್ಮಾಣಕ್ಕೆ ಕೋವಿಡ್‌ ಹಣ ಬಳಸಿಲ್ಲ ಎಂದು ರೋಹಿಣಿ ಸಿಂಧೂರಿ ಬುಧವಾರ ಮಾಧ್ಯಮಗಳಿಗೆ ತಿಳಿಸಿದ್ದಾರೆ.

‘ಕೋವಿಡ್‌ ಸಂಕಷ್ಟದ ಸಮಯದಲ್ಲಿ ಈಜುಕೊಳ ನಿರ್ಮಾಣ ಕೆಲಸ ಆಗಿಲ್ಲ. 2020ರ ಡಿಸೆಂಬರ್‌ನಲ್ಲಿ ನಿರ್ಮಾಣ ಕಾರ್ಯ ಆರಂಭವಾಗಿತ್ತು. ಆ ಅವಧಿಯಲ್ಲಿ ಕೋವಿಡ್‌ ಎರಡನೇ ಅಲೆಯ ಯಾವುದೇ ಮುನ್ಸೂಚನೆ ಇರಲಿಲ್ಲ’ ಎಂದು ಮಾಧ್ಯಮಗಳ ವಾಟ್ಸ್‌ಆ್ಯಪ್‌ ಗ್ರೂಪ್‌ಗೆ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಇದನ್ನೂ ಓದಿ:  

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು