ಭಾನುವಾರ, ಮಾರ್ಚ್ 26, 2023
23 °C

ನಾಲ್ವರು ಪೊಲೀಸ್ ಅಧಿಕಾರಿಗಳ ವರ್ಗಾವಣೆ: ರಾಮನಗರ ಎಸ್ಪಿಯಾಗಿ ಎಸ್. ಗಿರೀಶ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದ ನಾಲ್ವರು ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.

ಆ್ಯಂಬಿಡೆಂಟ್ ವಂಚನೆ ಪ್ರಕರಣದಲ್ಲಿ ಬಿಜೆಪಿ ಮುಖಂಡ ಜನಾರ್ದನ್ ರೆಡ್ಡಿ ಹಾಗೂ ಹಲವು ಪ್ರಕರಣಗಳಲ್ಲಿ ರಾಜಕೀಯ ಮುಖಂಡರನ್ನು ಬಂಧಿಸಿದ್ದ ಖಡಕ್ ಪೊಲೀಸ್ ಅಧಿಕಾರಿ ಎಸ್‌. ಗಿರೀಶ್ ಅವರನ್ನು ರಾಮನಗರ ಎಸ್ಪಿಯಾಗಿ ವರ್ಗಾವಣೆ ಮಾಡಲಾಗಿದೆ.

ಬೆಂಗಳೂರು ಸಿಸಿಬಿ ವಿಭಾಗದ ಡಿಸಿಪಿ ಆಗಿದ್ದ ಗಿರೀಶ್ ಅವರನ್ನು ಆ್ಯಂಬಿಡೆಂಟ್ ಪ್ರಕರಣದ ತನಿಖೆ ನಡೆಯುತ್ತಿರುವಾಗಲೇ ಕೆಎಸ್‌ಆರ್‌ಪಿ ಕಮಾಂಡೇಟ್ ಆಗಿ ವರ್ಗಾವಣೆ ಮಾಡಲಾಗಿತ್ತು. ಇದೀಗ ಕಮಾಂಡೇಟ್ ಆಗಿ ಅನೂಪ್ ಶೆಟ್ಟಿ ಅವರನ್ನು ವರ್ಗಾಯಿಸಲಾಗಿದೆ.

ಬೆಂಗಳೂರಿನ ಈಶಾನ್ಯ ವಿಭಾಗದ ಡಿಸಿಪಿ ಭೀಮಾಶಂಕರ್ ಗುಳೇದ್ ಅವರನ್ನು ಸಿಐಡಿ ಎಸ್ಪಿಯಾಗಿ ವರ್ಗಾಯಿಸಲಾಗಿದೆ. ಅವರ ಸ್ಥಾನಕ್ಕೆ ಸಿ.ಕೆ. ಬಾಬಾ ಅವರು ವರ್ಗಾವಣೆಯಾಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು