ಭಾನುವಾರ, ಸೆಪ್ಟೆಂಬರ್ 25, 2022
21 °C

ಕಲ್ಯಾಣ ಕರ್ನಾಟಕ: ಜಲ ಸಂಪನ್ಮೂಲ ಇಲಾಖೆಯಿಂದ ಎಂಜಿನಿಯರ್‌ಗಳಿಗೆ ನೇಮಕಾತಿ ಆದೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಜಲ ಸಂಪನ್ಮೂಲ ಇಲಾಖೆ ನಡೆಸಿದ ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆಯಾಗಿರುವ ಕಿರಿಯ ಎಂಜಿನಿಯರ್‌ ಮತ್ತು ಸಹಾಯಕ ಎಂಜಿನಿಯರ್‌ಗಳು ಸೇರಿ 160 ಮಂದಿಗೆ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಶುಕ್ರವಾರ ನೇಮಕಾತಿ ಆದೇಶ ವಿತರಿಸಿದರು.

2020ರಲ್ಲಿ ಈ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿತ್ತು. 2021ರಲ್ಲಿ ಪ್ರಕ್ರಿಯೆ ಪೂರ್ಣಗೊಳಿಸಿ ಆಯ್ಕೆಪಟ್ಟಿ ಪ್ರಕಟಿಸಲಾಗಿತ್ತು. ಆದರೆ, ಮೂಲ ದಾಖಲೆಗಳ ಪರಿಶೀಲನೆ ಮತ್ತು ಸಿಂಧುತ್ವ ಪ್ರಮಾಣಪತ್ರ ಸಲ್ಲಿಕೆ ವಿಳಂಬದ ಕಾರಣದಿಂದ ನೇಮಕಾತಿ ಆದೇಶ ನೀಡುವುದು ತಡವಾಗಿತ್ತು.

ಆಯ್ಕೆಯಾದವರಿಗೆ ನೇಮಕಾತಿ ಆದೇಶ ವಿತರಿಸಿ ಮಾತನಾಡಿದ ಕಾರ
ಜೋಳ, ‘ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 371–ಜೆ ತಿದ್ದುಪಡಿ ಜಾರಿಯಾದ ಬಳಿಕ ಆ ಭಾಗದ ಜನರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಹೆಚ್ಚಿನ ಮೀಸಲಾತಿ ದೊರಕುತ್ತಿದೆ. ಆರಂಭದ ವರ್ಷ
ಗಳಲ್ಲಿ ಇತರ ಭಾಗದ ಸರ್ಕಾರಿ ನೌಕರರೇ ಆ ಸೌಲಭ್ಯ ದುರ್ಬಳಕೆ ಮಾಡಿಕೊಂಡಿದ್ದರು. ಈಗ ಅದಕ್ಕೆ ಕಡಿವಾಣ ಹಾಕಿದ್ದೇವೆ. ಕಲ್ಯಾಣ ಕರ್ನಾಟಕದ ಹುದ್ದೆಗಳಿಗೆ ನೇಮಕಗೊಂಡವರು ಇತರೆಡೆ ಹುದ್ದೆ ಬಯಸಬೇಡಿ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು