ಸೋಮವಾರ, ಅಕ್ಟೋಬರ್ 25, 2021
26 °C

ಕಾಂಗ್ರೆಸ್ ನಂಬಿರುವುದು ಐಸಿಸ್ ಸ್ಮೃತಿಯೇ?: ಮನುಸ್ಮೃತಿ ಟೀಕೆಗೆ ಬಿಜೆಪಿ ತಿರುಗೇಟು

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮನುಸ್ಮೃತಿಯನ್ನು ನಂಬಿರುವ ಬಿಜೆಪಿ ದಲಿತ ವಿರೋಧಿ ಅಜೆಂಡಾವನ್ನು ವ್ಯವಸ್ಥಿತವಾಗಿ ಸ್ಥಾಪಿಸುತ್ತಿದೆ ಎಂಬ ಕಾಂಗ್ರೆಸ್ ಟೀಕೆಗೆ ಕಮಲ ಪಾಳೆಯ ತೀಕ್ಷ್ಣವಾಗಿ ತಿರುಗೇಟು ನೀಡಿದೆ. ಕಾಂಗ್ರೆಸ್ ನಂಬಿರುವುದು ತಾಲಿಬಾನ್, ಐಸಿಸ್ ಸ್ಮೃತಿಯೇ ಎಂದು ಬಿಜೆಪಿ ಪ್ರಶ್ನಿಸಿದೆ.

‘ಕಾಂಗ್ರೆಸ್ ಪಕ್ಷ ನಂಬಿರುವುದು ತಾಲಿಬಾನ್, ಐಸಿಸ್ ಸ್ಮೃತಿಯೇ? ತಮ್ಮದೇ ಪಕ್ಷದ ದಲಿತ ಶಾಸಕನ ಮನೆ ಮೇಲೆ ಅಮಾನುಷ ದಾಳಿ ನಡೆದಾಗ ಕಾಂಗ್ರೆಸ್ ಪಕ್ಷ ವರ್ತಿಸಿದ ರೀತಿಯನ್ನು ಕಂಡಾಗ ಈ ಪ್ರಶ್ನೆ ಕಾಡದೆ ಇರದು’ ಎಂದು ‘ದಲಿತ ವಿರೋಧಿ ಕಾಂಗ್ರೆಸ್ (#DalitVirodhiCongress)’ ಹ್ಯಾಷ್‌ಟ್ಯಾಗ್‌ನೊಂದಿಗೆ ಬಿಜೆಪಿ ಟ್ವೀಟ್ ಮಾಡಿದೆ.

ಓದಿ: 

‘ಮನುಸ್ಮೃತಿಯನ್ನು ನಂಬಿರುವ ಬಿಜೆಪಿ ತನ್ನ ಗುಪ್ತ ಅಜೆಂಡಾವಾದ ದಲಿತ ವಿರೋಧಿ ವಾತಾವರಣವನ್ನು ವ್ಯವಸ್ಥಿತವಾಗಿ ಸ್ಥಾಪಿಸುತ್ತಿರುವ ಪರಿಣಾಮದಿಂದಲೇ ರಾಜ್ಯದಲ್ಲಿ ದಲಿತರ ಮೇಲಿನ ದೌರ್ಜನ್ಯ ಹೆಚ್ಚುತ್ತಿದೆ. ಬಿಜೆಪಿ ಸರ್ಕಾರವು ಸಂಪುಟದಲ್ಲಿ ದಲಿತರಿಗೆ ಅವಕಾಶ ನೀಡದೆ ತನಗಿರುವ ದಲಿತರ ಮೇಲಿನ ಅಸಹನೆಯನ್ನು ಬಹಿರಂಗಪಡಿಸಿದೆ’ ಎಂದು ಕಾಂಗ್ರೆಸ್ ಟ್ವೀಟ್ ಮಾಡಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು