ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಧಾನಿಯಲ್ಲಿ ಐಎಸ್ ಜಾಲ; ಒಬ್ಬ ವಶಕ್ಕೆ

Last Updated 17 ಆಗಸ್ಟ್ 2020, 19:52 IST
ಅಕ್ಷರ ಗಾತ್ರ

ಬೆಂಗಳೂರು: ಗಲಭೆ ಪ್ರಕರಣದ ತನಿಖೆಯನ್ನು ಸ್ಥಳೀಯ ಪೊಲೀಸರು ಚುರುಕುಗೊಳಿಸಿರುವ ಬೆನ್ನಲ್ಲೇ ನಗರಕ್ಕೆ ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಅಧಿಕಾರಿಗಳು ಹೆಜ್ಜೆ ಇಟ್ಟಿದ್ದಾರೆ. ನಗರದಲ್ಲಿ ಸೋಮವಾರ ಪ್ರತ್ಯೇಕವಾಗಿ ವಿಶೇಷ ಕಾರ್ಯಾಚಣೆ ನಡೆಸಿರುವ ಎನ್‌ಐಎ ಅಧಿಕಾರಿಗಳು, ಇಸ್ಲಾಮಿಕ್ ಸ್ಟೇಟ್ (ಐಎಸ್) ಉಗ್ರಗಾಮಿ ಸಂಘಟನೆಜೊತೆ ನಂಟು ಹೊಂದಿದ್ದ ಎನ್ನಲಾದ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದಿದ್ದಾರೆ.

ಸಿಎಎ ವಿರುದ್ಧ ದೇಶದಲ್ಲಿ ಪ್ರತಿಭಟನೆ ನಡೆಯುತ್ತಿದ್ದ ಸಂದರ್ಭದಲ್ಲೇ ಭಯೋತ್ಪಾದನಾ ದಾಳಿ ನಡೆಸಲು ಐಎಸ್ ಸಹೋದರ ಸಂಘಟನೆಯಾದ ಇಸ್ಲಾಮಿಕ್ ಸ್ಟೇಟ್ ಖೋರಾಸಾನ್ ಪ್ರಾಂತ್ಯ (ಐಎಸ್‌ಕೆಪಿ) ಸಂಚು ರೂಪಿಸಿತ್ತು. ಅದನ್ನು ಬಯಲು ಮಾಡಿದ್ದ ಎನ್‌ಐಎ ಅಧಿಕಾರಿಗಳು, ಕಾಶ್ಮೀರ್‌ದ ದಂಪತಿಗಳು ಸೇರಿ ಐವರನ್ನು ಬಂಧಿಸಿದ್ದರು.

ಅದೇ ಆರೋಪಿಗಳ ಜೊತೆ ಹಾಗೂ ಐಎಸ್ ಜೊತೆ ನಂಟು ಇಟ್ಟುಕೊಂಡಿದ್ದ ಎನ್ನಲಾದ ವ್ಯಕ್ತಿಯೊಬ್ಬ ಬೆಂಗಳೂರಿನಲ್ಲಿ ಅಡಗಿದ್ದ. ಈ ಬಗ್ಗೆ ಮಾಹಿತಿ ಕಲೆಹಾಕಿದ್ದ ಎನ್‌ಐಎ ಅಧಿಕಾರಿಗಳು, ಆತನನ್ನು ವಶಕ್ಕೆ ಪಡೆದು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ ಎಂದು ತಿಳಿದುಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT