ಬುಧವಾರ, ಸೆಪ್ಟೆಂಬರ್ 29, 2021
20 °C

ಎಸ್.ಆರ್‌.ಬೊಮ್ಮಾಯಿ ರೀತಿ ಅವರ ಪುತ್ರ ಆಗಲು ಸಾಧ್ಯವೇ?: ಸಿದ್ದರಾಮಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ‘ಮಹಾತ್ಮ ಗಾಂಧಿ ಬಹಳ ಒಳ್ಳೆಯವರು. ಆದರೆ, ಮಗ ಕುಡುಕನಾದ. ಹಾಗೆಯೇ, ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಗುಣಗಳು ಅವರ ಪುತ್ರ ಬಸವರಾಜ ಬೊಮ್ಮಾಯಿ ಅವರಿಗೆ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ತಂದೆಯ ಗುಣ ಕೆಲ ಮಕ್ಕಳಿಗೆ ಬರುವುದಿಲ್ಲ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಸವರಾಜ ಬೊಮ್ಮಾಯಿ ಅವರ ಹೆಸರು ಸೂಚಿಸಿರುವುದು ಯಡಿಯೂರಪ್ಪ. ಸರ್ಕಾರದ ಮೇಲೆ ಅವರು ಸಹಜವಾಗಿ ಹಿಡಿತ ಹೊಂದಿರುತ್ತಾರೆ. ಇಂಥ ಸಂದರ್ಭದಲ್ಲಿ ನೂತನ ಮುಖ್ಯಮಂತ್ರಿ ಸ್ವತಂತ್ರವಾಗಿ ಸರ್ಕಾರ ನಡೆಸಲು ಸಾಧ್ಯವಾಗುತ್ತದೆಯೇ? ಬಿಜೆಪಿಯ ಸಿದ್ಧಾಂತ, ಸರ್ಕಾರದ ನೀತಿಗಳು ಬದಲಾಗುತ್ತವೆಯೇ?’ ಎಂದು ಪ್ರಶ್ನಿಸಿದರು.

‘ಈಗಲೇ ಅವರ ಮೇಲೆ ಸುಮ್ಮನೇ ದೂರುವುದಿಲ್ಲ. ಒಳ್ಳೆಯ ಕೆಲಸ ಮಾಡಲಿ ಎಂದು ಆಶಿಸುತ್ತೇನೆ’ ಎಂದರು.

‘ಸೂಪರ್‌ ಮುಖ್ಯಮಂತ್ರಿ’ ಆರೋಪದಿಂದ ಮುಕ್ತನಾಗಿರುವೆ ಎಂಬ ಬಿ.ವೈ.ವಿಜಯೇಂದ್ರ ಹೇಳಿಕೆಗೆ, ‘ಅಂದರೆ ಸೂಪರ್ ಮುಖ್ಯಮಂತ್ರಿ ಆಗಿದ್ದರು ಎಂಬುದು ಅವರ ಮಾತಿನ ಅರ್ಥವೇ? ಅದನ್ನು ಒಪ್ಪಿಕೊಂಡಂತೆ ಅಲ್ಲವೇ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು