ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಯು ಪರೀಕ್ಷೆ ನಡೆಸುವ ಬಗ್ಗೆ ಟ್ವೀಟ್ ಮಾಡಿಲ್ಲ: ಅಶ್ವತ್ಥನಾರಾಯಣ ಸ್ಪಷ್ಟನೆ

Last Updated 4 ಜೂನ್ 2021, 1:48 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯದಲ್ಲಿ ಪರೀಕ್ಷೆಗಳನ್ನು ನಡೆಸುವ ವಿಚಾರವಾಗಿ ಯಾವುದೇ ಸಭೆಯಲ್ಲಿ ಭಾಗವಹಿಸಿಲ್ಲ ಮತ್ತು ಹೇಳಿಕೆ ನೀಡಿಲ್ಲ. ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಸಂದೇಶ ಸತ್ಯಕ್ಕೆ ದೂರವಾದದ್ದು’ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದ್ದಾರೆ.

ಶಿಕ್ಷಣ ತಜ್ಞರು ಮತ್ತು ಮಕ್ಕಳ ಕಲ್ಯಾಣ ಸಮಿತಿ ಜತೆ ಸರ್ಕಾರವು ಸಭೆ ನಡೆಸಿದ್ದು, ಪಿಯು ಪರೀಕ್ಷೆಗಳನ್ನು ಜುಲೈ 7ರಿಂದ ನಡೆಸಲು ತೀರ್ಮಾನಿಸಲಾಗಿದೆ ಎಂದು ಅಶ್ವತ್ಥನಾರಾಯಣ ಟ್ವೀಟ್‌ ಮಾಡಿದ್ದಾರೆ ಎನ್ನಲಾದ ನಕಲಿ ಸಂದೇಶವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಎಲ್ಲ ವಿಷಯಗಳ ಪರೀಕ್ಷೆಯ ಅವಧಿಯನ್ನು 120 ನಿಮಿಷಗಳಿಗೆ ಕಡಿತಗೊಳಿಸಲಾಗಿದೆ ಎಂದೂ ನಕಲಿ ಸಂದೇಶದಲ್ಲಿ ಉಲ್ಲೇಖಿಸಲಾಗಿದೆ. ಈ ಕುರಿತು ಸ್ಪಷ್ಟನೆ ನೀಡಿ ಸಚಿವರು ಟ್ವೀಟ್ ಮಾಡಿದ್ದಾರೆ.

‘ರಾಜ್ಯದಲ್ಲಿ ಪರೀಕ್ಷೆಯನ್ನು ನಡೆಸುವ ಬಗ್ಗೆ ಯಾವುದೇ ಸಭೆ ಅಥವಾ ಚರ್ಚೆಗಳಲ್ಲಿ ನಾನು ಭಾಗವಹಿಸಿಲ್ಲ. ಸಂಬಂಧಪಟ್ಟ ಇಲಾಖೆ ಈ ಕುರಿತು ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳಲಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಈ ಕುರಿತು ಹರಿದಾಡುತ್ತಿರುವ ಯಾವುದೇ ಹೇಳಿಕೆಗಳು ಸತ್ಯಕ್ಕೆ ದೂರ. ಅಂತಹ ಯಾವುದೇ ಸುಳ್ಳು ಸಂದೇಶವನ್ನು ಫಾರ್ವರ್ಡ್ ಮಾಡಬೇಡಿ’ ಎಂದು ಅಶ್ವತ್ಥನಾರಾಯಣ ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT