ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದ ಪರಿಸರ ಪರಂಪರೆ ಜೀವಂತವಾಗಿಡಲು ಕನ್ನಡಿಗರು ಪ್ರತಿಜ್ಞೆ ಮಾಡಬೇಕು: ಸದ್ಗುರು

Last Updated 1 ನವೆಂಬರ್ 2022, 12:42 IST
ಅಕ್ಷರ ಗಾತ್ರ

ಬೆಂಗಳೂರು: 67ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಈಶಾ ಫೌಂಡೇಶನ್‌ನ ಸದ್ಗುರು ಜಗ್ಗಿ ವಾಸುದೇವ್ ಅವರು ಶುಭ ಕೋರಿದ್ದಾರೆ.

ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಈ ರಾಜ್ಯೋತ್ಸವದಂದು, ಹಿಂದಿನ ತಲೆಮಾರುಗಳ ಸಾಧನೆಗಳ ಆಧಾರದ ಮೇಲೆ ನಾವು ಬೆಳೆಯಲು ಮತ್ತು ಮುಂದಿನ ಪೀಳಿಗೆಗೆ ಹೊಸ ಸಾಧ್ಯತೆಗಳನ್ನು ಸೃಷ್ಟಿಸಲು, ನಮ್ಮ ಅದ್ಭುತ ರಾಜ್ಯದ ಶ್ರೀಮಂತ ಸಾಂಸ್ಕೃತಿಕ ಮತ್ತು ಪರಿಸರ ಪರಂಪರೆಯನ್ನು ಜೀವಂತವಾಗಿಡಲು ಪ್ರತಿಯೊಬ್ಬ ಕನ್ನಡಿಗರು ಪ್ರತಿಜ್ಞೆ ಕೈಗೊಳ್ಳಬೇಕು ಎಂದು ಸದ್ಗುರು ಟ್ವೀಟ್‌ ಮೂಲಕ ಕರೆ ನೀಡಿದ್ದಾರೆ.

ಸದ್ಗುರು ನೇತೃತ್ವದಲ್ಲಿ ಚಿಕ್ಕಬಳ್ಳಾಪುರದ ಆವಲಗುರ್ಕಿ ಸಮೀಪದ ಜಾಲಾರಿ ನರಸಿಂಹಸ್ವಾಮಿ ಬೆಟ್ಟದ ಬಳಿ ನೂತನ ಈಶಾ ಯೋಗ ಕೇಂದ್ರ ನಿರ್ಮಾಣಗೊಳ್ಳುತ್ತಿದೆ. ಜೊತೆಗೆ ಅವರ 'ಮಣ್ಣು ಉಳಿಸಿ' ಅಭಿಯಾನವೂ ನಡೆಯುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT