ಶನಿವಾರ, ಮೇ 15, 2021
25 °C

ಕಡಿಮೆ ದರದಲ್ಲಿ ಲಸಿಕೆ, ನೆರವಿನ ಹಸ್ತವಲ್ಲವೇ? ಸಿದ್ದರಾಮಯ್ಯಗೆ ಬಿಜೆಪಿ ಪ್ರಶ್ನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ದೇಶದಲ್ಲಿ ಕಡಿಮೆ ದರದಲ್ಲಿ ಲಸಿಕೆ ಪೂರೈಕೆ ಮತ್ತು ಕೋವಿಡ್‌ ಲ್ಯಾಬ್‌ ವ್ಯವಸ್ಥೆ ನೆರವಿನ ಹಸ್ತವಲ್ಲವೇ’ ಎಂದು ಬಿಜೆಪಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವನರನ್ನು ಪ್ರಶ್ನಿಸಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಬಿಜೆ‍ಪಿ ನಮ್ಮ ಪ್ರಶ್ನೆಗಳಿಗೆ ಉತ್ತರಿಸುವ ಧೈರ್ಯ ತೋರುವಿರಾ ಎಂದು ಪ್ರಶ್ನಿಸಿದೆ.

ಬಿಜೆಪಿ ಪ್ರಶ್ನೆಗಳು:

ಕೋವಿಡ್ ಸಂದರ್ಭದಲ್ಲಿ ಆರ್ಥಿಕ ಸ್ಥಿತಿ ಪಾತಾಳ ಸೇರದಂತೆ ನೋಡಿಕೊಂಡಿದ್ದು ನೆರವಿನ ಹಸ್ತವಲ್ಲವೇ?

ದೇಶಾದ್ಯಂತ ಪ್ರಾಥಮಿಕ ಆರೋಗ್ಯ ವ್ಯವಸ್ಥೆ ಸುಧಾರಣೆ ಆರಂಭಿಸಿದ್ದು ನೆರವಿನ ಹಸ್ತವಲ್ಲವೇ?

ದೇಶದ ಜನರಲ್ಲಿ ಆತ್ಮ ವಿಶ್ವಾಸ ಮೂಡಿಸಿದ್ದು ನೆರವಿನ ಹಸ್ತವಲ್ಲವೇ?

ಲಸಿಕೆಯ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ್ದೇ ಕಾಂಗ್ರೆಸ್‌ ನೀಡಿದ ನೆರವಿನ ಹಸ್ತ. ತಪ್ಪು ದಾರಿಗೆಳೆದದ್ದೇ ಕಾಂಗ್ರೆಸ್‌ ಸಾಧನೆ ಎಂದು ಹೇಳಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು