ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕದ್ದು ಮುಚ್ಚಿ ಕೊಲಂಬೊ ಯಾತ್ರೆ ಮಾಡಿರಲಿಲ್ಲ: ಎಚ್‌ಡಿಕೆ

Last Updated 12 ಸೆಪ್ಟೆಂಬರ್ 2020, 19:16 IST
ಅಕ್ಷರ ಗಾತ್ರ

ಬೆಂಗಳೂರು: ಜೆಡಿಎಸ್ ಪಕ್ಷದ ಗೌಪ್ಯ ಕಾರ್ಯಸೂಚಿ ಹಾಗೂ ಮುಂದಿನ ರಾಜಕೀಯ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಶಾಸಕರು ಹಾಗೂ ಪ್ರಮುಖ ನಾಯಕರೊಂದಿಗೆ ಶ್ರೀಲಂಕಾದ ಕೊಲಂಬೊಗೆ ಒಮ್ಮೆ ಪ್ರವಾಸ ಹೋಗಿದ್ದು ನಿಜ. ಆದರೆ, ಕದ್ದು ಮುಚ್ಚಿ 'ಕೊಲಂಬೊಯಾತ್ರೆ' ಮಾಡಿರಲಿಲ್ಲ ಎಂದು ಜೆಡಿಎಸ್ ಶಾಸಕಾಂಗ ಪಕ್ಷದಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಒಂದಾನೊಂದು ಕಾಲದಲ್ಲಿ ನಮ್ಮ ಪಕ್ಷದಲ್ಲಿದ್ದ ರಾಜಕಾರಣಿಯೊಬ್ಬರು, ಜೆಡಿಎಸ್ ಶಾಸಕರು ಮತ್ತು ನಾನು ಕೊಲಂಬೊಪ್ರವಾಸ ಕೈಗೊಂಡಿದ್ದಾಗಿ ನೀಡಿರುವ ಹೇಳಿಕೆ ಎತ್ತಣ ಮಾಮರ ಎತ್ತಣ ಕೋಗಿಲೆ ಎಂಬಂತಿದೆ ಎಂದಿದ್ದಾರೆ.

2014 ರ ಜೂನ್ ತಿಂಗಳಲ್ಲಿ ಪಕ್ಷ ಸಂಘಟನೆ ಬಗ್ಗೆ ವಿಸ್ತೃತವಾಗಿ ಚರ್ಚಿಸಲು ಕೊಲಂಬೊಗೆ ಪ್ರವಾಸ ಹೋಗುವುದಾಗಿ ಬಹಿರಂಗವಾಗಿಯೇ ಮಾಧ್ಯಮಗಳಿಗೆ ಹೇಳಿ ಹೋಗಿದ್ದಲ್ಲದೇ, ಅಲ್ಲಿ ನಡೆದ ಶಾಸಕರ ಜೊತೆಗಿನ ಚರ್ಚೆಯ ದೃಶ್ಯಾವಳಿಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದೆವು. ಇದರಲ್ಲಿ ಯಾವುದೇ ಗುಟ್ಟು ಇರಲಿಲ್ಲ.

ನೆರೆಯ ರಾಜ್ಯ ಗೋವಾ ಇಲ್ಲವೇ ರಾಜ್ಯದ ರೆಸಾರ್ಟ್ನಲ್ಲಿ ಸಭೆ ನಡೆಸುವುದಕ್ಕಿಂತ ಯಾವುದೇ ಅಡಚಣೆ ಇಲ್ಲದೆ ಶಾಸಕರೊಂದಿಗೆ ಮುಕ್ತವಾಗಿ ಚರ್ಚಿಸಲು ಕೊಲಂಬೊಪ್ರವಾಸ ದುಬಾರಿಯಲ್ಲ ಎಂಬ ಕಾರಣಕ್ಕೆ ಇಂತಹ ಸಭೆ ನಡೆಸಿದ್ದು ನಿಜ. ವಿಮಾನ ಹತ್ತುವಾಗಲೂ ಮತ್ತು ವಾಪಸು ಬಂದಾಗ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದೇನೆ.

ಕೊಲಂಬೊಪ್ರಯಾಣ ಅದೇ ಮೊದಲು ಮತ್ತು ಕೊನೆ. ಇದರಲ್ಲಿ ಬಚ್ಚಿಡುವುದು ಏನೇನೂ ಇಲ್ಲ. ಅವರು ನಮ್ಮೊಂದಿಗೆ ಬಂದಿದ್ದರೆ ಹೊರತು ನಾವು ಅವರೊಂದಿಗೆ ಹೋಗಿರಲಿಲ್ಲ ಎಂದು ಕಿಡಿಕಾರಿದ್ದಾರೆ.

ಆಚಾರವಿಲ್ಲದ ನಾಲಿಗೆ ನಿನ್ನ

ನೀಚ ಬುದ್ಧಿಯ ಬಿಡು ನಾಲಿಗೆ

ವಿಚಾರವಿಲ್ಲದೆ ಪರರ ದುಶಿಸುವುದಕ್ಕೆ

ಚಾಚಿ ಕೊಂಡಿರುವಂತ ನಾಲಿಗೆ

ಸತತವು ನುಡಿ ಕಂಡ್ಯ ನಾಲಿಗೆ

ಚಾಡಿ ಹೇಳಲು ಬೇಡ ನಾಲಿಗೆ- ಪುರಂದರ ದಾಸರು ಎಂದು ಪುರಂದರದಾಸರ ಕೀರ್ತನೆಯೊಂದರ ಸಾಲುಗಳನ್ನು ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT