ಶನಿವಾರ, ಅಕ್ಟೋಬರ್ 16, 2021
29 °C

ಬಿಎಸ್‌ವೈ ಆಪ್ತ, ಇತರರ ಮನೆ ಮೇಲೆ ಐ.ಟಿ ದಾಳಿ: 2ನೇ ದಿನವೂ ಮುಂದುವರಿದ ಶೋಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿ.ಎಸ್‌. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸರ್ಕಾರಿ ಕಾಮಗಾರಿಗಳ ಗುತ್ತಿಗೆ ಹೆಸರಿನಲ್ಲಿ ನಡೆದಿರುವ ಭ್ರಷ್ಟಾಚಾರ, ತೆರಿಗೆ ವಂಚನೆ ಮತ್ತು ಹಣದ ಅಕ್ರಮ ವಹಿವಾಟಿನ ಆರೋಪಕ್ಕೆ ಸಂಬಂಧಿಸಿದಂತೆ ಎರಡನೇ ದಿನವೂ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ ಮುಂದುವರಿದಿದೆ.

ಗುರುವಾರ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆದಾಯ ತೆರಿಗೆ ದಾಳಿ ನಡೆದಿತ್ತು. ಯಡಿಯೂರಪ್ಪ ಕುಟುಂಬದ ಆಪ್ತ, ಮುಖ್ಯಮಂತ್ರಿ ಸಚಿವಾಲಯದ ಸಿಬ್ಬಂದಿ ಉಮೇಶ್‌, 31 ಗುತ್ತಿಗೆದಾರರು, ಲೆಕ್ಕ ಪರಿಶೋಧಕರು ಸೇರಿದಂತೆ ಹಲವರ ಮನೆ, ಕಚೇರಿಗಳಲ್ಲಿ ತಡರಾತ್ರಿಯವರೆಗೂ ಶೋಧ ನಡೆಸಲಾಗಿತ್ತು. ಶುಕ್ರವಾರ ಬೆಳಿಗ್ಗೆಯಿಂದಲೇ ಮತ್ತೆ ಕಾರ್ಯಾಚರಣೆ ಮುಂದುವರಿದಿದೆ.

ವಿಜಯೇಂದ್ರ ಸಹಪಾಠಿ ಮೇಲೆ ದಾಳಿ: ಯಡಿಯೂರಪ್ಪ ಅವರ ಮಗ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಸಹಪಾಠಿ ಅರವಿಂದ್‌ ಮನೆಯಲ್ಲಿ ಐ.ಟಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ. ಅರವಿಂದ್‌ ಅವರ ವಸಂತನಗರದ ಮನೆಯ ಮೇಲೆ ಶುಕ್ರವಾರ ಬೆಳಿಗ್…

ಕಬ್ಬಿಣ ಮತ್ತು ಸಿಮೆಂಟ್ ಸಗಟು ಪೂರೈಕೆದಾರರಾಗಿರುವ ಸಹಕಾರ ನಗರದ ರಾಹುಲ್ ಎಂಟರ್ ಪ್ರೈಸಸ್ ಮೇಲೆ ಗುರುವಾರ ದಾಳಿ ನಡೆಸಿದ್ದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು, ರಾತ್ರಿ 11ರವರೆಗೂ ಶೋಧ ನಡೆಸಿದ್ದರು. ಗುರುವಾರ ಈ ಸಂಸ್ಥೆಯ ಕಚೇರಿಯ ಬಾಗಿಲಿಗೆ ಬೀಗ ಹಾಕಿ ತೆರಳಿದ್ದರು. ಶುಕ್ರವಾರ ಬೆಳಿಗ್ಗೆಯಿಂದ ಮತ್ತೆ ಶೋಧ ನಡೆಸುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು