ಬುಧವಾರ, ಸೆಪ್ಟೆಂಬರ್ 22, 2021
24 °C
ನೂತನ ಮಾಹಿತಿ ತಂತ್ರಜ್ಞಾನ ನೀತಿಗೆ ಒಪ್ಪಿಗೆ

ನೂತನ ಮಾಹಿತಿ ತಂತ್ರಜ್ಞಾನ ನೀತಿಗೆ ಒಪ್ಪಿಗೆ: 60 ಲಕ್ಷ ಉದ್ಯೋಗ ಸೃಷ್ಟಿ ಗುರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮುಂದಿನ ಐದು ವರ್ಷಗಳಲ್ಲಿ ಸುಮಾರು 60 ಲಕ್ಷ ಉದ್ಯೋಗ ಸೃಷ್ಟಿಸುವ ‘ನೂತನ ಮಾಹಿತಿ ತಂತ್ರಜ್ಞಾನ ಕಾರ್ಯನೀತಿ 2020–25’ ಕ್ಕೆ ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಅಲ್ಲದೆ, ಈ ಅವಧಿಯಲ್ಲಿ ದೇಶದ ಡಿಜಿಟಲ್‌ ಒಟ್ಟು ಆರ್ಥಿಕತೆಯಲ್ಲಿ (3 ಟ್ರಿಲಿಯನ್ ಡಾಲರ್‌) ಕರ್ನಾಟಕದ ಪಾಲು ಶೇ 30 ರಷ್ಟು ಆಗಿರಬೇಕು ಎಂಬ ಗುರಿಯನ್ನೂ ಈ ನೀತಿ ಹೊಂದಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, ಸಂಪುಟ ಸಭೆ ಬಳಿಕ ತಿಳಿಸಿದರು.

ಎಲೆಕ್ಟ್ರಾನಿಕ್ಸ್‌ ಮತ್ತು ಸೆಮಿಕಂಡಕ್ಟರ್ ಉಪಕರಣಗಳ‌ ಉತ್ಪಾದನೆಯ ಉದ್ಯಮಗಳ ಸ್ಥಾಪನೆಗೆ ಪ್ರೋತ್ಸಾಹ ನೀಡಲು ಹಲವು ರಿಯಾಯ್ತಿಗಳನ್ನು ಪ್ರಕಟಿಸಲಾಗಿದೆ. ಈ ಕ್ಷೇತ್ರದಲ್ಲಿ ಬಂಡವಾಳ ಹೂಡುವವರಿಗೆ ಭೂಮಿ ಖರೀದಿಗೆ ಶೇ 25 ಮತ್ತು ಘಟಕ ಹಾಗೂ ಯಂತ್ರೋಪಕರಣಗಳ ಖರೀದಿಗೆ ಶೇ 20 ರಷ್ಟು ಸಬ್ಸಿಡಿ ನೀಡಲಾಗುವುದು ಎಂದರು.

ಮುದ್ರಾಂಕ ಮತ್ತು ನೋಂದಣಿ ಶುಲ್ಕ ಪಾವತಿಯನ್ನು ಶೇ 100 ರಷ್ಟು, ಭೂಪರಿವರ್ತನೆ ಶುಲ್ಕ ಶೇ 100 ರಷ್ಟು ಹಿಂದಿರುಗಿಸಲಾಗುವುದು. ವಿದ್ಯುತ್ ದರದಲ್ಲಿ ಪ್ರತಿ ಯುನಿಟ್‌ ಮೇಲೆ ₹1 ರಿಯಾಯ್ತಿ ನೀಡಲಾಗುವುದು. ಉದ್ಯಮ ಕಾರ್ಯಾರಂಭ ಮಾಡಿದ ದಿನದಿಂದ 5 ವರ್ಷಗಳವರೆಗೆ ಈ ಪ್ರಯೋಜನ ಸಿಗಲಿದೆ ಎಂದು ಅವರು ವಿವರಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು