ಶನಿವಾರ, ಫೆಬ್ರವರಿ 4, 2023
18 °C

ಜನಸಂಪರ್ಕ ಯಾತ್ರೆಯಲ್ಲ, ಆಂದೋಲನ: ಡಿ.ಕೆ. ಶಿವಕುಮಾರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:‌ ‘ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್‌ ಜೋಡೊ ಕೇವಲ ಜನಸಂಪರ್ಕ ಯಾತ್ರೆಯಲ್ಲ; ಆಂದೋಲನ. ಬೆಲೆ ಏರಿಕೆ, ರೈತರ ಸಮಸ್ಯೆ, ಭ್ರಷ್ಟಾಚಾರ, ನಿರುದ್ಯೋಗ, ಕೋಮು ದ್ವೇಷದ ವಿರುದ್ದದ ಈ ನಡಿಗೆ ಹಳ್ಳಿ, ಹಳ್ಳಿಯಲ್ಲೂ ಜನರ ಮನ ಮುಟ್ಟಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ಜನಸಾಮಾನ್ಯರ ಬಳಿಗೆ ಹೋಗಿ ಅವರ ನೋವು ನೇರವಾಗಿ ಆಲಿಸಿರುವ ಏಕೈಕ ನಾಯಕ ರಾಹುಲ್ ಗಾಂಧಿ’ ಎಂದು ಬಣ್ಣಿಸಿದರು.

ಯಾತ್ರೆಯ ಅನುಭವ ಹಂಚಿಕೊಂಡ ಅವರು, ‘ಇಂದಿರಾ ಗಾಂಧಿ ಅವರನ್ನು ನೋಡಲು ಜನ ಹೇಗೆ ನೂಕುನುಗ್ಗಲು ಮಾಡಿಕೊಂಡು ಬರುತ್ತಿದ್ದರೊ, ಅದೇ ರೀತಿ ರಾಹುಲ್ ಗಾಂಧಿ ಅವರನ್ನು ನೋಡಲು ನೂರಾರು ಕಿ. ಮೀ ದೂರದಿಂದ ಮಕ್ಕಳು ತಮ್ಮ ಪೋಷಕರ ಜತೆ ಬಂದಿದ್ದರು’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು