ಬುಧವಾರ, ಅಕ್ಟೋಬರ್ 20, 2021
28 °C

ಸಿಎಂ ಬೊಮ್ಮಾಯಿಯಿಂದ ಜಗದೀಶ್‌ ಶೆಟ್ಟರ್ ಅಂತರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹುಬ್ಬಳ್ಳಿಯಲ್ಲಿ ಸೋಮವಾರ ಎರಡು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರೂ, ಹುಬ್ಬಳ್ಳಿ ಸೆಂಟ್ರಲ್‌ ಕ್ಷೇತ್ರದ ಶಾಸಕ ಜಗದೀಶ ಶೆಟ್ಟರ್‌ ಅವರು ಕಾರ್ಯಕ್ರಮಗಳಿಂದ ದೂರ ಉಳಿದಿರುವುದು ಚರ್ಚೆಗೆ ಗ್ರಾಸವಾಗಿದೆ.

ಬಾಣತಿಕಟ್ಟೆಯಲ್ಲಿ ನಡೆದ ವಿವಿಧ ಠಾಣೆಗಳ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ಕಾರ್ಯಕ್ರಮದ ಆಹ್ವಾನಿತರಲ್ಲಿ ಶಾಸಕ ಜಗದೀಶ ಶೆಟ್ಟರ್‌ ಅವರ ಹೆಸರಿತ್ತು. ಆದರೂ, ಅವರು ಧಾರವಾಡದಲ್ಲಿ ನಡೆದ ಜಿಲ್ಲಾ ಪಂಚಾಯ್ತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳಲು ಧಾರವಾಡಕ್ಕೆ ತೆರಳಿದ್ದರು. 

ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿದ್ದ ಸಚಿವ ಶಂಕರಪಾಟೀಲ ಮುನೇನಕೊಪ್ಪ ಅವರು ಮುಖ್ಯಮಂತ್ರಿ ಬೊಮ್ಮಾಯಿ ಅವರ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ನಂತರ ಸಭೆಗೆ ತೆರಳಿದ್ದರು.

‘ಸ್ವಾಭಿಮಾನ ಬಿಟ್ಟು ಬೊಮ್ಮಾಯಿ ಅವರ ಸಚಿವ ಸಂಪುಟದಲ್ಲಿ ಸಚಿವನಾಗುವುದಿಲ್ಲ’ ಎಂದು ಶೆಟ್ಟರ್ ಹೇಳಿದ್ದನ್ನೂ ಸ್ಮರಿಸಿಕೊಳ್ಳಬಹುದು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು