ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಕ್ಷಣಾ ತಂತ್ರಜ್ಞಾನ ಹಬ್‌: ರಾಜನಾಥ್‌ ಸಿಂಗ್‌ಗೆ ಶೆಟ್ಟರ್ ಪತ್ರ

Last Updated 17 ಜೂನ್ 2021, 19:46 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯದಲ್ಲಿ ರಕ್ಷಣಾ ತಂತ್ರಜ್ಞಾನ ಹಬ್‌ಗಳನ್ನು ಘೋಷಿಸುವ ಮೂಲಕ ಏರೋಸ್ಪೇಸ್‌ ಮತ್ತು ರಕ್ಷಣಾ ಉತ್ಪಾದನಾ ಘಟಕಗಳಿಗೆ ಉತ್ತೇಜನ ನೀಡುವಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರಿಗೆ ಪತ್ರ ಬರೆಯಲಾಗಿದೆ’ ಎಂದು ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್‌ ತಿಳಿಸಿದರು.

ಏರೋಸ್ಪೇಸ್‌ ಮತ್ತು ಡಿಫೆನ್ಸ್‌ ರೌಂಡ್‌ ಟೇಬಲ್‌ ವೆಬಿನಾರ್‌ನಲ್ಲಿ ಮಾತನಾಡಿದ ಅವರು, ‘ದೇಶದ ಶೇ 25ಕ್ಕೂ ಹೆಚ್ಚು ಏರ್‌ಕ್ರಾಫ್ಟ್‌ ಮತ್ತು ಸ್ಪೇಸ್‌ಕ್ರಾಫ್ಟ್‌ ಕೈಗಾರಿಕೆಗಳು ರಾಜ್ಯದಲ್ಲಿವೆ. ರಕ್ಷಣಾ ಕ್ಷೇತ್ರಕ್ಕೆ ಅಗತ್ಯವಿರುವ ಶೇ 67ರಷ್ಟು ಏರ್‌ಕ್ರಾಫ್ಟ್‌ ಮತ್ತು ಹೆಲಿಕ್ಯಾಪ್ಟರ್‌ ಉತ್ಪಾದನೆ ಇಲ್ಲಿ ನಡೆಯುತ್ತದೆ. ಅಲ್ಲದೆ, ಎಫ್‌ಡಿಐ ಇಂಟಲಿಜೆನ್ಸ್‌ನ ವಿಶ್ವ ಏರೋಸ್ಪೇಸ್‌ ನಗರಗಳ ಸೂಚ್ಯಂಕದ ಮೊದಲ 10ನೇ ಸ್ಥಾನದಲ್ಲಿ ಬೆಂಗಳೂರು ನಗರ ಸ್ಥಾನ ಪಡೆದುಕೊಂಡಿದೆ. ಈ ಕ್ಷೇತ್ರಕ್ಕೆ ಬಿಡಿಭಾಗಗಳನ್ನು ಪೂರೈಸುವ 2000ಕ್ಕೂ ಹೆಚ್ಚು ಎಂಎಸ್‌ಎಂಇಗಳಿವೆ. ಏರೋಸ್ಪೇಸ್‌ ಹಾಗೂ ಡಿಫೆನ್ಸ್‌ ನೀತಿ ಜಾರಿಗೊಳಿಸಿದ ಮೊದಲ ರಾಜ್ಯ ನಮ್ಮದು’ ಎಂದರು.‌

‘ಬೆಂಗಳೂರು, ಮೈಸೂರು, ತುಮಕೂರು ಮತ್ತು ಚಾಮರಾಜನಗರ ಈ ನಾಲ್ಕೂ ಹಬ್‌ಗಳು ಏರೋಸ್ಪೇಸ್‌ ಮತ್ತು ಡಿಫೆನ್ಸ್‌ ಎಕೋಸಿಸ್ಟಮ್‌ಗೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಹೊಂದಿವೆ. ರಾಜ್ಯದಲ್ಲಿ ರಕ್ಷಣಾ ತಂತ್ರಜ್ಞಾನ ಹಬ್‌ ಘೋಷಣೆಯಿಂದ ಏರೋಸ್ಪೇಸ್‌ ಮತ್ತು ರಕ್ಷಣಾ ಕ್ಷೇತ್ರದ ಬೆಳವಣಿಗೆಗೆ ಮತ್ತಷ್ಟು ಪುಷ್ಟಿ ಸಿಗಲಿದೆ. ಜೊತೆಗೆ, ಆತ್ಮನಿರ್ಭರ ಭಾರತ ಗುರಿಗೆ ಮತ್ತಷ್ಟು ಬಲ ತುಂಬಲಿದೆ ಎಂದು ಪತ್ರದಲ್ಲಿ ವಿವರಿಸಿದ್ದೇವೆ’ ಎಂದೂ ಹೇಳಿದರು.

ಕೈಗಾರಿಕಾ ಅಭಿವೃದ್ದಿ ಆಯುಕ್ತೆ ಗುಂಜನ್‌ ಕೃಷ್ಣ ಮಾತನಾಡಿ, ‘ಏರೋಸ್ಪೇಸ್‌ ಮತ್ತು ಡಿಫೆನ್ಸ್‌ ನೀತಿ 2021-2026’ ಕರಡು ಅಂಶಗಳನ್ನು ವಿವರಿಸಿದರು.

‘ಕರ್ನಾಟಕವನ್ನು ಏರೋಸ್ಪೇಸ್‌ ಮತ್ತು ಡಿಫೆನ್ಸ್‌ ಕೈಗಾರಿಕಾ ಕ್ಷೇತ್ರದ ಪ್ರಮುಖ ಬಂಡವಾಳ ಹೂಡಿಕೆಯ ರಾಜ್ಯವನ್ನಾಗಿಸುವುದು ನೀತಿಯ ಗುರಿ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT