ಮಂಗಳವಾರ, ಆಗಸ್ಟ್ 16, 2022
28 °C

ರಾಜ್ಯಸಭೆ ಚುನಾವಣೆ: ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವುದು ಅಚ್ಚರಿಯಾಗಿದೆ– ಜಗ್ಗೇಶ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ರಾಜ್ಯಸಭೆ ಚುನಾವಣೆಗೆ ನನ್ನನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿರುವುದು ಅಚ್ಚರಿ ಮೂಡಿಸಿದೆ. ಪಕ್ಷದಲ್ಲಿ ನಾನೊಬ್ಬ ಸಾಮಾನ್ಯ ಕಾರ್ಯಕರ್ತ. ಪಕ್ಷ ಮತ್ತು ಸರ್ಕಾರದಲ್ಲಿ ಯಾವುದೇ ಸ್ಥಾನಮಾನಗಳ ಕನಸು ಕಂಡವನಲ್ಲ’ ಎಂದು ಜಗ್ಗೇಶ್‌ ‘ಪ್ರಜಾವಾಣಿ’ಗೆ  ಪ್ರತಿಕ್ರಿಯಿಸಿದರು.

‘ರಾಷ್ಟ್ರಕ್ಕಾಗಿ ತನ್ನನ್ನೇ ಸಮರ್ಪಿಸಿಕೊಂಡು ಕೆಲಸ ಮಾಡುತ್ತಿರುವ ಬಿಜೆಪಿಯಲ್ಲಿ ಸಾಮಾನ್ಯ ಕಾರ್ಯಕರ್ತನೆಂದು ಗುರುತಿಸಿಕೊಳ್ಳಲು ನನಗೆ ಹೆಮ್ಮೆ ಇದೆ. ಆದರೆ ಪಕ್ಷ ಒಬ್ಬ ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿದೆ. ಇದು ನನಗೆ ಸಂತಸ ಉಂಟು ಮಾಡಿದೆ. ಮುಂದೆಯೂ ಪಕ್ಷ ಹೇಳುವ ಕೆಲಸಗಳನ್ನು ಮಾಡುತ್ತೇನೆ’ ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು