ಮಂಗಳವಾರ, ಜೂನ್ 28, 2022
26 °C

ಜಾಮಿಯಾ ಮಸೀದಿ: ವಕ್ಫ್‌ ಸಚಿವರು ಸೇರಿ 5 ಮಂದಿಗೆ ನೋಟಿಸ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಡ್ಯ: ಆಂಜನೇಯನ ದೇವಾಲಯವಾಗಿದ್ದ ಶ್ರೀರಂಗಪಟ್ಟಣ ಜಾಮಿಯಾ ಮಸೀದಿಯನ್ನು ವಶಕ್ಕೆ ಪಡೆಯಲು ವಿಫಲರಾಗಿದ್ದಾರೆ ಎಂದು ಆರೋಪಿಸಿ ಭಜರಂಗ ಸೇನೆ ಸಂಘಟನೆಯು ವಕೀಲರ ಮೂಲಕ ಮುಜರಾಯಿ– ಹಜ್‌ ಮತ್ತು ವಕ್ಫ್‌ ಸಚಿವರು, ವಕ್ಫ್‌ ಮಂಡಳಿ ಆಡಳಿತಾಧಿಕಾರಿ, ಭಾರತೀಯ ಪುರಾತತ್ವ ಸರ್ವೇಕ್ಷಣಾ ಸಂಸ್ಥೆ ಪ್ರಾದೇಶಿಕ ನಿರ್ದೇಶಕರು,ಮಂಡ್ಯ ಜಿಲ್ಲಾಧಿಕಾರಿ, ರಾಜ್ಯ ಧಾರ್ಮಿಕ ಪರಿಷತ್‌ ಆಯುಕ್ತರಿಗೆ ನೋಟಿಸ್‌ ಜಾರಿಗೊಳಿಸಿದೆ.

ಮೂಡಲಬಾಗಿಲು ಆಂಜನೇಯನ ದೇವಾಲಯವನ್ನು ಕೆಡವಿ ಟಿಪ್ಪು ಸುಲ್ತಾನ್‌ ಜಾಮಿಯಾ ಮಸೀದಿ ನಿರ್ಮಾಣ ಮಾಡಿದ್ದಾರೆ. ಒತ್ತಾಯಪೂರ್ವಕವಾಗಿ ದೇವಾಲಯಕ್ಕೆ ಹಾನಿ ಮಾಡಿ ಮಸೀದಿಯನ್ನಾಗಿ ಪರಿವರ್ತಿಸಲಾಗಿದೆ. ದೇವಾಲಯದ ಜಾಗದಲ್ಲಿ ಅಕ್ರಮವಾಗಿ ಮದಸರಾ ನಡೆಸಲಾಗುತ್ತಿದೆ. ಆದರೆ ರಾಜ್ಯ ಸರ್ಕಾರ, ಅಧಿಕಾರಿಗಳು ಮಸೀದಿಯನ್ನು ವಾಪಸ್‌ ಪಡೆಯಲು ವಿಫಲರಾಗಿದ್ದಾರೆ ಎಂದು ಆರೋಪಿಸಲಾಗಿದೆ.

 ಕೂಡಲೇ ಜಾಮಿಯಾ ಮಸೀದಿಯನ್ನು ವಶಕ್ಕೆ ಪಡೆದು ಅಲ್ಲಿ ಅನುಮಂತನ ಪೂಜೆಗೆ ಅವಕಾಶ ನೀಡಬೇಕು. ದೆಹಲಿಯ ಜ್ಞಾನವ್ಯಾಪಿ ಮಸೀದಿ ಮಾದರಿಯಲ್ಲಿ ವಿಡಿಯೊ ಸಮೀಕ್ಷೆ ನಡೆಸಲು ಕ್ರಮ ಕೈಗೊಳ್ಳಬೇಕು. 30 ದಿನದೊಳಗೆ ನೋಟಿಸ್‌ಗೆ ಉತ್ತರ ನೀಡಬೇಕು. ಇಲ್ಲದಿದ್ದರೆ 1 ಸಾವಿರ ಹನುಮ ಭಕ್ತರು ರಾಜ್ಯ ಹೈಕೋರ್ಟ್‌ನಲ್ಲಿ ದೂರು ದಾಖಲಿಸಿ ಕಾನೂನು ಹೋರಾಟ ನಡೆಸಲಿದ್ದಾರೆ ಎಂದು ನೋಟಿಸ್‌ನಲ್ಲಿ ಎಚ್ಚರಿಕೆ ನೀಡಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು