ರೈತರ ಹೋರಾಟ ಬೆಂಬಲಿಸಿ ಜ. 20ಕ್ಕೆ ರಾಜಭವನ ಚಲೊ
ಹುಬ್ಬಳ್ಳಿ: ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟ ಬೆಂಬಲಿಸಿ ಜ. 20ರಂದು ಕಾಂಗ್ರೆಸ್ ವತಿಯಿಂದ ರಾಜಭವನ ಚಲೋ ನಡೆಸಲಾಗುವುದು ಎಂದು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ಬೆಳಗಾವಿ ವಿಭಾಗ ಮಟ್ಟದ ಸಂಕಲ್ಪ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರದ ರೈತರ ವಿರೋಧಿ ಕೃಷಿನೀತಿ ಖಂಡಿಸಿ ನಡೆಯುತ್ತಿರುವ ಹೋರಾಟ ಮುಂದುವರೆಯಲಿದೆ. ರಾಜಭವನ ಚಲೋದಲ್ಲಿ ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಿಂದ ಕಾರ್ಯ ಕರ್ತರು ಬಸ್‌ಗಳಲ್ಲಿ ಬರಲಿದ್ದಾರೆ ಎಂದು ಹೇಳಿದರು.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.