ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಜನೌಷಧ: 40 ಮಳಿಗೆಗೆ ಪ್ರಸ್ತಾವನೆ’

ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮಾಹಿತಿ
Last Updated 12 ನವೆಂಬರ್ 2022, 15:20 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯದಲ್ಲಿ ಹೊಸದಾಗಿ 500ಜನೌಷಧ ಮಳಿಗೆಗಳನ್ನು ತೆರೆಯುವ ಗುರಿ ಹೊಂದಲಾಗಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ 40 ಹೊಸ ಮಳಿಗೆಗಳಿಗೆ ಅನುಮತಿ ನೀಡುವಂತೆಭಾರತೀಯ ಔಷಧ ಮಂಡಳಿಗೆ (ಬಿಪಿಪಿಐ) ಪ್ರಸ್ತಾವನೆ ಸಲ್ಲಿಸಲಾಗಿದೆ’ ಎಂದುಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

‘ಜನೌಷಧ ಮಳಿಗೆ ಸ್ಥಾಪನೆಯಲ್ಲಿ ಕರ್ನಾಟಕ ದ್ವಿತೀಯಸ್ಥಾನದಲ್ಲಿದ್ದು, ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಈ ಮಳಿಗೆಯನ್ನು ಸ್ಥಾಪಿಸಲಾಗುವುದು.ಬಡ, ಹಿಂದುಳಿದ ಮತ್ತು ಮಧ್ಯಮ ವರ್ಗದವರಿಗೆ ರಿಯಾಯಿತಿ ದರದಲ್ಲಿ ಔಷಧಗಳು ಹಾಗೂ ಶಸ್ತ್ರಚಿಕಿತ್ಸೆಯ ಪರಿಕರಗಳನ್ನು ಒದಗಿಸಲು ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆ ಸಹಕಾರಿಯಾಗಿದೆ. ಈ ಯೋಜನೆಯನ್ನು ರಾಜ್ಯದಲ್ಲಿಅತ್ಯುತ್ತಮವಾಗಿ ಜಾರಿಗೊಳಿಸಲಾಗಿದ್ದು, ಈವರೆಗೆ 1,052 ಜನೌಷಧ ಮಳಿಗೆಗಳನ್ನು ತೆರೆಯಲಾಗಿದೆ’ ಎಂದು ಹೇಳಿದ್ದಾರೆ.

‘ಮಳಿಗೆ ಸ್ಥಾಪನೆಯಲ್ಲಿ ಉತ್ತರ ಪ್ರದೇಶದ ನಂತರ ಸ್ಥಾನದಲ್ಲಿ ಕರ್ನಾಟಕ ಇದೆ. ಕೇರಳ ಮೂರನೇ ಸ್ಥಾನದಲ್ಲಿದೆ. ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಮಳಿಗೆಗಳನ್ನು ತೆರೆಯಲು ರಾಜ್ಯ ಸರ್ಕಾರ ಕಾರ್ಯೋನ್ಮುಖವಾಗಿದೆ. ಈ ವರ್ಷದ ಫೆಬ್ರವರಿ ಬಳಿಕ ಸುಮಾರು 300 ಮಳಿಗೆಗಳನ್ನು ತೆರೆಯಲಾಗಿದೆ’ ಎಂದು ತಿಳಿಸಿದ್ದಾರೆ.

ಅಗ್ಗದ ದರ:‘ಉತ್ತರ ಕರ್ನಾಟಕ, ಹಳೆ ಮೈಸೂರು ಭಾಗದಿಂದಲೂ ಜನೌಷಧಿ ಮಳಿಗೆಗಳ ಪ್ರಾರಂಭಕ್ಕೆ ಹೆಚ್ಚಿನ ಒತ್ತಡವಿದೆ.ರಾಜ್ಯದಲ್ಲಿ ಜನರಿಕ್ ಔಷಧಗಳು ಮಾರುಕಟ್ಟೆ ದರಕ್ಕಿಂತ ಶೇ 50ರಿಂದ ಶೇ 80 ರಷ್ಟು ಅಗ್ಗದ ದರದಲ್ಲಿ ದೊರೆಯುತ್ತಿವೆ. ಒಟ್ಟು 1,451 ಔಷಧಗಳು ಮತ್ತು 240 ಶಸ್ತ್ರಚಿಕಿತ್ಸೆ ಪರಿಕರಗಳು ಹಾಗೂ ದುಬಾರಿ ವೆಚ್ಚದ ಕ್ಯಾನ್ಸರ್ ಔಷಧಗಳೂ ದೊರೆಯುತ್ತವೆ’ ಎಂದು ಹೇಳಿದ್ದಾರೆ.

‘ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಜನೌಷಧ ಕೇಂದ್ರ ಪ್ರಾರಂಭಿಸಲು ಫಾರ್ಮಸಿ ಪದವೀಧರರಿಂದ ಹೆಚ್ಚಿನ ಬೇಡಿಕೆ ಬರುತ್ತಿದೆ. ಸ್ವಾಯತ್ತ ಸಂಸ್ಥೆಗಳಿಗೆ 120 ಚದರ ಅಡಿ ಸ್ಥಳವನ್ನು ಉಚಿತವಾಗಿ ನೀಡಲಾಗುತ್ತಿದೆ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT