ಗುರುವಾರ , ಮೇ 13, 2021
25 °C

ರಾಜ್ಯದಲ್ಲಿ ಜನತಾ ಕರ್ಫ್ಯೂ ಅನಗತ್ಯ– ಸಚಿವ ಸುಧಾಕರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸೋಂಕಿನ ಪ್ರಮಾಣ ಮಹಾರಾಷ್ಟ್ರದಷ್ಟು ನಮ್ಮಲ್ಲಿ ಇಲ್ಲ. ಹೀಗಾಗಿ, ಅಲ್ಲಿ ವಿಧಿಸಲಾಗಿರುವ ಜನತಾ ಕರ್ಪ್ಯೂವನ್ನು ರಾಜ್ಯದಲ್ಲಿ ಜಾರಿ ಮಾಡುವ ಅಗತ್ಯ ಇಲ್ಲ’ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ಹೇಳಿದರು.

ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ಕೋವಿಡ್‌ ನಿಯಂತ್ರಿಸಲು ಬೇರೆ ರಾಜ್ಯಗಳು ತೆಗೆದುಕೊಂಡಿರುವ ಕಠಿಣ ಕ್ರಮಗಳ ಬಗ್ಗೆಯೂ ಪರಿಶೀಲನೆ ನಡೆಸಿದ್ದೇವೆ. ರಾಜ್ಯದಲ್ಲಿ ಕೋವಿಡ್ ಹೆಚ್ಚಳದ ಅಂದಾಜು, ಕೈಗೊಳ್ಳಬೇಕಾದ ನಿಯಂತ್ರಣಗಳಿಗೆ ಸಂಬಂಧಿಸಿದಂತೆ ತಾಂತ್ರಿಕ ಸಲಹಾ ಸಮಿತಿಯ ವರದಿ ಕುರಿತು ಮುಖ್ಯಮಂತ್ರಿ ಜೊತೆ ಚರ್ಚಿಸಿ, ಬಿಗಿ ಕ್ರಮ ತೆಗೆದುಕೊಳ್ಳುವ ಬಗ್ಗೆ ನಿರ್ಧರಿಸಲಾಗುವುದು’ ಎಂದರು.

ಸಾವಿನ ಪ್ರಮಾಣವನ್ನು  ಸೋಂಕಿತರ ಪೈಕಿ ಎಷ್ಟು ಜನ ಮೃತಪಟ್ಟಿದ್ದಾರೆ ಎಂಬುದರ ಆಧಾರದ ಮೇಲೆ ಅಳೆಯಬೇಕು. ನಮ್ಮಲ್ಲಿ ಸದ್ಯ ಶೇ 0.5 ಅಥವಾ ಶೇ 0.6ರಷ್ಟು ಸಾವಿನ ಪ್ರಮಾಣ ಇದೆ. ಇದನ್ನು ಇನ್ನಷ್ಟು ಕಡಿಮೆ ಮಾಡುವ ಗುರಿ ಇದೆ’ ಎಂದರು.

‘ಮುಖ್ಯಮಂತ್ರಿ, ಗೃಹ ಸಚಿವರು ಸೇರಿದಂತೆ ಎಲ್ಲರೂ ಕೋವಿಡ್‌ ಹೆಚ್ಚಳವನ್ನು ಗಮನಿಸುತ್ತಿದ್ದಾರೆ. ಏನೇ ಆದರೂ ಜನರ ಸಹಕಾರ ಅಗತ್ಯ. ಕೆಲವು ಕಾರ್ಯಕ್ರಮಗಳನ್ನು ಮುಂದೂಡುವುದರಿಂದ ಜೀವ ಏನೂ ಹೋಗುವುದಿಲ್ಲ. ಜನರು ಸಹಕಾರ ನೀಡಬೇಕು’ ಎಂದು ಮನವಿ ಮಾಡಿದರು.

ಸರ್ಕಾರಿ ವ್ಯವಸ್ಥೆಯಲ್ಲಿ ಈ ಚುಚ್ಚುಮದ್ದಿನ ಕೊರತೆ ಆಗಿಲ್ಲ. ಕೋವಿಡ್‌ ವಿಷಯದಲ್ಲಿ ಯಾರೂ ರಾಜಕಾರಣ ಮಾಡಬಾರದು. ಎಲ್ಲರೂ ಸೇರಿ ಹೋರಾಟ ಮಾಡಿದರೆ ಸೋಂಕು ಎದುರಿಸಬಹುದು ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು