ಶನಿವಾರ, ಅಕ್ಟೋಬರ್ 23, 2021
24 °C

ವಾಲ್ಮೀಕಿ ಪೀಠದಲ್ಲಿ ಅ.2ರಿಂದ ಜನಜಾಗೃತಿ ಕಾರ್ಯಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹರಿಹರ: ತಾಲ್ಲೂಕಿನ ರಾಜನಹಳ್ಳಿಯ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ಅ.2ರಿಂದ 4ರವರೆಗೆ ಜನಜಾಗೃತಿ ಕಾರ್ಯಕ್ರಮ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಕುರಿತು ಜನಪ್ರತಿನಿಧಿಗಳ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪೀಠದ ಪ್ರಸನ್ನಾನಂದ ಸ್ವಾಮೀಜಿ ತಿಳಿಸಿದ್ದಾರೆ.

ಮಠದ ಆವರಣದಲ್ಲಿ ಅ.2ರಂದು ಮಹಾತ್ಮ ಗಾಂಧಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ 2 ದಿನಗಳ ಜನ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ಕಾರ್ಯಕ್ರಮಕ್ಕೆ ಒಂದು ಸಾವಿರ ಜನರನ್ನು ಆಹ್ವಾನಿಸಲಾಗಿದೆ.

ಅ.4ರ ಬೆಳಿಗ್ಗೆ 10ರಿಂದ ಮಧ್ಯಾಹ್ನ2ರವರೆಗೆ ಸಾರಿಗೆ ಸಚಿವ ಶ್ರೀರಾಮುಲು ನೇತೃತ್ವದಲ್ಲಿ ಸಮಾಜದ ಶಾಸಕರು ಹಾಗೂ ಸಂಸದರ ಸಮ್ಮಖದಲ್ಲಿ ಎಸ್‍.ಟಿ. ಮೀಸಲಾತಿ ಹೆಚ್ಚಳದ ವಿಳಂಬದ ಕುರಿತು ಸಂವಾದ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.