ಜಯಪ್ರಕಾಶ್ ಹೆಗ್ಡೆ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ

ಬೆಂಗಳೂರು: ಮಾಜಿ ಸಚಿವ ಕೆ.ಜಯಪ್ರಕಾಶ್ ಹೆಗ್ಡೆ ಅವರನ್ನು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ಇವರು ಜೆ.ಎಚ್.ಪಟೇಲ್ ನೇತೃತ್ವದ ಸರ್ಕಾರದಲ್ಲಿ ಮೀನುಗಾರಿಕೆ ಮತ್ತು ಬಂದರು ಖಾತೆ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಆ ಬಳಿಕ ಪಕ್ಷೇತರರಾಗಿ ಬ್ರಹ್ಮಾವರ ಕ್ಷೇತ್ರದಿಂದ ಆಯ್ಕೆಯಾಗಿದ್ದರು.
ಒಂದು ಬಾರಿ ಉಡುಪಿ–ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಲೋಕಸಭೆಗೆ ಆಯ್ಕೆಯಾಗಿದ್ದರು. ಕಳೆದ ವಿಧಾನಸಭಾ ಚುನಾವಣೆಗೂ ಮೊದಲು ಹೆಗ್ಡೆ ಬಿಜೆಪಿ ಸೇರಿದ್ದರು. ಉಡುಪಿ– ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಆಕಾಂಕ್ಷಿಯಾಗಿದ್ದರು. ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್ ನೀಡಿದ್ದರಿಂದ ಹೆಗ್ಡೆ ನೇಪಥ್ಯಕ್ಕೆ ಸರಿಯುವಂತಾಗಿತ್ತು.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.