ಮಂಗಳವಾರ, ಸೆಪ್ಟೆಂಬರ್ 28, 2021
24 °C

ಸಾಮಾಜಿಕ ಗಣತಿ ಕುರಿತ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಿಲ್ಲ: ಜಯಪ್ರಕಾಶ್ ಹೆಗ್ಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಹಿಂದುಳಿದ ವರ್ಗಗಳ ಆಯೋಗ ಸಲ್ಲಿಸುವ ಪ್ರತಿ ವರದಿಯನ್ನು ಸದಸ್ಯ ಕಾರ್ಯದರ್ಶಿ ಅಧಿಕೃತಗೊಳಿಸದ ಹೊರತು ಸರ್ಕಾರಕ್ಕೆ ಸಲ್ಲಿಸಲು ಸಾದ್ಯವಿಲ್ಲ. ಈ ಕಾರಣದಿಂದ ಸಾಮಾಜಿಕ ಹಾಗೂ ಶೈಕ್ಷಣಿಕ ಗಣತಿಯ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಿಲ್ಲ ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ತಿಳಿಸಿದರು.

ಬುಧವಾರ ನಗರ ಹೊರವಲಯದ ಅಮೃತ್ ಗಾರ್ಡನ್‌ನಲ್ಲಿ ಹಮ್ಮಿಕೊಂಡಿದ್ದ ‘ಅಂತ್ಯೋದಯ’ ಮಾಹಿತಿ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಸಾಮಾಜಿಕ ಹಾಗೂ ಶೈಕ್ಷಣಿಕ ಗಣತಿಯ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗದ ಕುರಿತು ಚರ್ಚೆಗಳು ನಡೆಯುತ್ತಿವೆ. ವರದಿ ಸಲ್ಲಿಕೆಗೆ ಕಾನೂನಾತ್ಮಕ ತೊಡಕುಗಳಿರುವ ಕಾರಣ ಸಲ್ಲಿಕೆಯಾಗಿಲ್ಲ ಎಂದರು.

ಮಾಧ್ಯಮಗಳಲ್ಲಿ ‘ಜಾತಿ ಜನಗಣತಿ’ಯ ಬಗ್ಗೆ ಹೆಚ್ಚು ಚರ್ಚೆಯಾಗುತ್ತಿದೆ. ವಾಸ್ತವವಾಗಿ ಅದು ಜಾತಿ ಜನಗಣತಿ ಅಲ್ಲ; ಸಾಮಾಜಿಕ ಹಾಗೂ ಶೈಕ್ಷಣಿಕ ಗಣತಿ. ವ್ಯಕ್ತಿಯೊಬ್ಬನ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸ್ಥಿತಿಗತಿ ಸೇರಿದಂತೆ 54 ಬಗೆಯ ಸಮಗ್ರ ಮಾಹಿತಿ ವರದಿಯಲ್ಲಿದೆ ಎಂದರು.

ಪುಸ್ತಕ ಮುದ್ರಣ: ಯಾವ ಜಾತಿಗಳು ಯಾವ ಪ್ರವರ್ಗದಡಿ ಬರುತ್ತವೆ ಎಂಬ ಮಾಹಿತಿಯನ್ನೊಳಗೊಂಡ ಚಿಕ್ಕ ಪುಸ್ತಕವನ್ನು ಮುದ್ರಿಸಿ ಪ್ರತಿ ಗ್ರಾಮ ಪಂಚಾಯಿತಿಗಳಿಗೆ ವಿತರಿಸಲು ಹಿಂದುಳಿದ ವರ್ಗಗಳ ಆಯೋಗ ನಿರ್ಧರಿಸಿದೆ. ಇದರಿಂದ ಜನಸಾಮಾನ್ಯರಿಗೆ ತಮ್ಮ ಜಾತಿ ಯಾವ ಪ್ರವರ್ಗಕ್ಕೆ ಸೇರಿದೆ ಎಂಬ ಮಾಹಿತಿ ಪಂಚಾಯಿತಿಯಲ್ಲಿ ಸಿಗಲಿದ್ದು, ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗುತ್ತದೆ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು