ಶುಕ್ರವಾರ, ಸೆಪ್ಟೆಂಬರ್ 24, 2021
23 °C

ಜಯರಾಮ್, ಸುಂದರ್‌ ರಾಜ್‌ಗೆ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಸುಂದರ ಪ್ರಕಾಶನ ನೀಡುವ ‘ಗೌರಿ ಸುಂದರ್ ವಾರ್ಷಿಕ ಪ್ರಶಸ್ತಿ’ಗೆ ಹಿರಿಯ ನಟರಾದ ಬಿ.ಆರ್. ಜಯರಾಮ್ ಹಾಗೂ ಎಂ.ಕೆ. ಸುಂದರ್ ರಾಜ್ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು ತಲಾ ₹ 10 ಸಾವಿರ ನಗದು ಹಾಗೂ ಫಲಕವನ್ನು ಒಳಗೊಂಡಿದೆ. ಗೌರಿ ಸುಂದರ್‌ ವಾರ್ಷಿಕ ಪ್ರಶಸ್ತಿ ಸಮಿತಿಯು ಪ್ರಶಸ್ತಿ ಪ್ರದಾನ ಸಮಾರಂಭವನ್ನು ಸೋಮವಾರ (ಆ.16) ಸಂಜೆ 6ಕ್ಕೆ ನಗರದ ಎನ್.ಆರ್.ಕಾಲೊನಿಯಲ್ಲಿರುವ ಸಿ. ಅಶ್ವತ್ಥ್ ಕಲಾಭವನದಲ್ಲಿ ಹಮ್ಮಿಕೊಂಡಿದೆ. ಕವಿ ಎಚ್‌.ಎಸ್. ವೆಂಕಟೇಶ್ ಮೂರ್ತಿ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. 2019ರಲ್ಲಿ ಮೊದಲ ಪ್ರಶಸ್ತಿಯನ್ನು ಸಾಹಿತಿ ಸುಬ್ರಾಯ ಚೊಕ್ಕಾಡಿ ಅವರಿಗೆ ನೀಡಲಾಗಿತ್ತು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು