ಶನಿವಾರ, ಜುಲೈ 2, 2022
25 °C
ವಿಧಾನ ಪರಿಷತ್: ಶಿಕ್ಷಕರ ಎರಡು ಕ್ಷೇತ್ರಗಳಿಗೆ ಜೆಡಿಎಸ್ ಅಭ್ಯರ್ಥಿ ಹೆಸರು ಪ್ರಕಟ

ಹೊರಟ್ಟಿ ವಿರುದ್ಧ ಜೆಡಿಎಸ್‌ನ ಗಡದಿನ್ನಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ವಿರುದ್ಧ ಶ್ರೀಶೈಲ ನಿಂಗಪ್ಪ ಗಡದಿನ್ನಿ ಅವರನ್ನು ಕಣಕ್ಕಿಳಿಸಲು ಜೆಡಿಎಸ್ ನಿರ್ಧರಿಸಿದೆ.

ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ, ‘ನಮ್ಮ ಪಕ್ಷ ಬಿಟ್ಟು ಹೊರಟ್ಟಿ ಅವರು ಬಿಜೆಪಿಗೆ ಹೋಗಿ ಚುನಾವಣೆಗೆ ನಿಂತಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ಅವರಿಗೆ ಯಾವ ರೀತಿ ನ್ಯಾಯ ಸಿಕ್ಕಿದೆ ಎಂಬುದು ಗೊತ್ತಿಲ್ಲ. ನಾವು ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ. ವಾಯವ್ಯ ಶಿಕ್ಷಕರ ಕ್ಷೇತ್ರದಿಂದ ಚಂದ್ರಶೇಖರ ಇ. ಲೋಣಿ ಅವರಿಗೆ ಟಿಕೆಟ್ ನೀಡಲಾಗಿದೆ’ ಎಂದರು. ‘ಜೂನ್‌ 3ರ ನಂತರ ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಎರಡು ದಿನ ಪ್ರವಾಸ ಮಾಡಿ ಮತಯಾಚನೆ ಮಾಡುತ್ತೇನೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು